ಶ್ರವಣಬೆಳಗೊಳ: ‘ಕಟ್ಟಡ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕ ಇಲಾಖೆ ಅನೇಕ ಶಾಶ್ವತ ಸೌಲಭ್ಯಗಳನ್ನು ಒದಗಿಸಿದೆ. ಅದರ ಸದ್ಬಳಕೆ ಮಾಡಿಕೊಳ್ಳುವುದರಿಂದ ತಮ್ಮ ಕುಟುಂಬಕ್ಕೆ ಹೆಚ್ಚಿನ ರಕ್ಷಣೆ ದೊರೆಯುತ್ತದೆ’ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

ಶ್ರವಣಬೆಳಗೊಳ ವ್ಯಾಪ್ತಿಯ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ಶ್ರೀರಾಮ ಕಟ್ಟಡ ಕಾರ್ಮಿಕರ ಸಂಘವು ಈಚೆಗೆ ಆಯೋಜಿಸಿದ್ದ ವಿಶ್ವ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರತಿಯೊಬ್ಬ ಕಾರ್ಮಿಕರು ಅನೇಕ ಸಂಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಎದೆಗುಂದದೆ ಕೆಲಸ ನಿರ್ವಹಿಸುತ್ತಾರೆ. ಅವರ ಭವಿಷ್ಯದ ಭದ್ರತೆಗೆ ಕಾರ್ಮಿಕ ಇಲಾಖೆ ಮುಂದಾಗಬೇಕು’ ಎಂದು ಹೇಳಿದರು.

ಸಾನಿಧ್ಯ ವಹಿಸಿದ್ದ ಕ್ಷೇತ್ರದ ಪೀಠಾಧಿಪತಿ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿದರು.

ಹಿರಿಯ ಕಾರ್ಮಿಕರು ಮತ್ತು ಕಾರ್ಮಿಕರ ಪ್ರತಿಭಾವಂತ ಮಕ್ಕಳನ್ನು ಸಂಘದ ವತಿಯಿಂದ ಶಾಸಕರು ಗೌರವಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಎನ್.ಆರ್.ವಾಸು, ಕಾವ್ಯ ಕಿರಣ್, ಕಾರ್ಮಿಕರ ಸಂಘದ ಅಧ್ಯಕ್ಷ ನಾಗೇಂದ್ರ, ಪದಾಧಿಕಾರಿಗಳಾದ ಗಾರೆ ನಾಗೇಂದ್ರ, ಶಿವಮೂರ್ತಿ, ಕಿರಣ್ ಕುಮಾರ್, ಜೀವನ್, ಪ್ರಕಾಶ್, ರವಿ, ಮಂಜೇಗೌಡ, ರವಿ ನಂಜಪ್ಪ, ಶರತ್ ಕುಮಾರ್, ಶಿವು, ರಾಜು, ತಮ್ಮಣ್ಣ, ಸತೀಶ್, ರವಿ, ಮಂಜ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-36-568604593

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.