ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ರೋಗತಡೆ; ಮಕ್ಕಳಿಗೆ ಲಸಿಕೆ

ನ್ಯೂಮೋಕಾಕಲ್ ಕಾಂಜುಗೇಟ್ ಲಸಿಕೆ (ಪಿಸಿವಿ) ಕಾರ್ಯಕ್ರಮಕ್ಕೆ ಚಾಲನೆ
Last Updated 9 ನವೆಂಬರ್ 2021, 15:31 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯ ಎಲ್ಲಾ ಮಕ್ಕಳಿಗೂ ನ್ಯೂಮೋಕಾಕಲ್ ಕಾಂಜುಗೇಟ್ ಲಸಿಕೆ (ಪಿಸಿವಿ) ಹಾಕುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಹಿಮ್ಸ್‌ಸಭಾಂಗಣದಲ್ಲಿ ಮಂಗಳಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನ್ಯೂಮೋಕಾಕಲ್ ಕಾಂಜುಗೇಟ್ ಲಸಿಕೆ (ಪಿಸಿವಿ) ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ಹಾಗೂ ಆಸ್ಪತ್ರೆಗೆ ಬರುವಂತಹ ಮಕ್ಕಳಿಗೆ ಲಸಿಕೆ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಸೂಕ್ತ ಮಾರ್ಗದರ್ಶನ ನೀಡುವಂತೆ ತಿಳಿಸಿದರು.

ಆರ್.ಸಿ.ಎಚ್ ಅಧಿಕಾರಿ ಡಾ. ಕಾಂತರಾಜ್ ಮಾತನಾಡಿ, ‘ಸಫ್ಟಪಿಕಲ್ ನ್ಯುಮೋನಿಯಾ ಎಂಬ ಬ್ಯಾಕ್ಟೀರಿಯಾದಿಂದ ಹರಡುವಂತಹ ರೋಗವಾಗಿದ್ದು, ದೇಶದಲ್ಲಿ ಒಟ್ಟು ಮೃತಪಡುವ 5 ವರ್ಷದೊಳಗಿನ ಮಕ್ಕಳಲ್ಲಿ ಶೇ 16ರಷ್ಟು ನ್ಯುಮೋನಿಯಾದಿಂದ ಮರಣ ಹೊಂದುತ್ತಿದ್ದಾರೆ. ಈ ರೋಗ ತಡೆಗಟ್ಟುವ ನಿಟ್ಟಿನಲ್ಲಿ ನ್ಯೂಮೋಕಾಕಲ್ಕಾಂಜುಗೇಟ್ ಲಸಿಕೆ (ಪಿಸಿವಿ)ಯನ್ನು ಮುಂಜಾಗ್ರತಾ ಕ್ರಮವಾಗಿ ದೇಶದಾದ್ಯಂತ ನೀಡಲಾಗುತ್ತಿದೆ’ ಎಂದುಅವರು ಹೇಳಿದರು.

‘ಪ್ರತಿವರ್ಷ 2.7 ಕೋಟಿ ಮಕ್ಕಳು ಹಾಗೂ 2.9 ಕೋಟಿ ಗರ್ಭಿಯಣಿಯರಿಗೆ ಲಸಿಕೆ ನೀಡಲಾಗುತ್ತಿದೆ. 108 ಕೋಲ್ಡ್ ಚೈನ್ ಪಾಯಿಂಟ್‌, ವ್ಯಾಕ್ಸಿನ್ ಕ್ಯಾರಿಯರ್ಸ್, ಐಸ್ ಬ್ಯಾಗ್ ಬಳಕೆಮಾಡಿ ಲಸಿಕೆಯನ್ನು ಸುರಕ್ಷಿತವಾಗಿ ಸಂಗ್ರಹಿಸಿ, ನಂತರ ಮಕ್ಕಳಿಗೆ ನೀಡಲಾಗುತ್ತದೆ’ ಎಂದರು.

‘ಈ ಲಸಿಕೆಯ ಮೊದಲ ಡೋಸ್ ಒಂದೂವರೆ ತಿಂಗಳು, ಎರಡನೇ ಡೋಸ್ ಮೂರೂವರೆ ತಿಂಗಳು, 9ತಿಂಗಳು ಮಕ್ಕಳಿಗೆ ನೀಡಲಾಗುತ್ತದೆ. ಇದರ ಡೋಸೆಜ್ 0.5 ಎಂ.ಎಲ್‌ ಇದ್ದು, ಮಗುವಿನಬಲಗೈಗೆ ಕೊಡಲಾಗುತ್ತದೆ’ ಎಂದು ಮಾಹಿತಿ ನೀಡಿದರು.

ಹಿಮ್ಸ್‌ ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ. ಸತೀಶ್ ಕುಮಾರ್‌, ಹಿಮ್ಸ್‌ ಆಡಳಿತಾಧಿಕಾರಿ ಗಿರೀಶ್ ನಂದನ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿಜಯ್, ಆಯುಷ್ ಇಲಾಖೆ ಅಧಿಕಾರಿ ವೀಣಾಲತಾ, ಡಾ. ವೆಂಕಟೇಶ್ ಹಾಜರಿದ್ದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT