ಬೇಲೂರು: ತಾಲ್ಲೂಕಿನ ಸಿದ್ದರಹಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್ ಸೋಮವಾರ ಚಾಲನೆ ನೀಡಿದರು.

ಮಲೆನಾಡು ಭಾಗದ ರಸ್ತೆಗಳಿಗೆ ಕಾಯಕಲ್ಪ ನೀಡಲು ಮೊದಲ ಆದ್ಯತೆ ನೀಡಲಾಗಿದೆ. ಸಿದ್ದರಹಳ್ಳಿಯಲ್ಲಿ ಲೋಕೋಪಯೋಗಿ ಇಲಾಖೆಯ ₹1.5ಕೋಟಿ ಅನುದಾನದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಲಾಗಿದೆ. ರಸ್ತೆ ದುಸ್ಥಿತಿ ತಲುಪಿದ್ದರಿಂದ ಸಿದ್ದರಹಳ್ಳಿಯ ಬನಶಂಕರಿ ಅಮ್ಮನವರ ಜಾತ್ರೆ ಸಮಯದಲ್ಲಿ ಸಾಕಷ್ಟು ಸಮಸ್ಯೆಗಳು ಉಂಟಾಗುತ್ತಿರುವುದನ್ನು ಸ್ಥಳೀಯರು ನನ್ನ ಗಮನಕ್ಕೆ ತಂದ ಕಾರಣ ಕೊಟ್ಟ ಮಾತಿನಂತೆ ಕೆಲಸ ಮಾಡಿಕೊಡಲಾಗುತ್ತಿದೆ ಎಂದರು.

ರಸ್ತೆಗಳು ಸುಸ್ಥಿತಿಯಲ್ಲಿದ್ದರೆ ಗ್ರಾಮಸ್ಥರಿಗೆ ಸಾಕಷ್ಟು ಅನುಕೂಲ ಆಗುವುದರಿಂದ ತಾಲ್ಲೂಕಿನಲ್ಲಿ ದುಸ್ಥಿತಿಯಲ್ಲಿರುವ ರಸ್ತೆಗಳನ್ನು ಹಂತ, ಹಂತವಾಗಿ ಅಭಿವೃದ್ದಿ ಪಡಿಸಲಾಗುತ್ತಿದೆ ಎಂದರು. ಬಿಜೆಪಿ ರಾಜ್ಯ ಯುವಘಟಕದ ಪ್ರಧಾನ ಕಾರ್ಯದರ್ಶಿ ಕೌರಿವಿಕ್ರಂ, ತಾಲ್ಲೂಕು ಯುವಘಟಕದ ಅಧ್ಯಕ್ಷ ಸುಮನ್, ಗ್ರಾಮಸ್ಥರಾದ ವಿಜಯ್, ಉಮೇಶ್, ವಸಂತ ಕುಮಾರ್, ನವೀನ್, ಮಂಜುನಾಥ್, ಸುರೇಶ್, ಮಧು, ಎಂಜಿನಿಯರ್ ಮಂಜುನಾಥ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-36-1623131034

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.