ಹಾಸನ: ರಾಜ್ಯದಲ್ಲಿ ಕಾಂಗ್ರೆಸ್ ಉಳಿಯಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ. ಅವರು ಇಲ್ಲ ಅಂದಿದ್ರೆ ಎಂದೋ ನಿರ್ನಾಮವಾಗುತ್ತಿತ್ತು ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು.

ಸಿದ್ದರಾಮಯ್ಯ ಕೈ ಬಿಟ್ಟರೆ ಈಗಲೂ ಪಕ್ಷ ಮುಳುಗುತ್ತೆ. ಸದ್ಯ ಕಾಂಗ್ರೆಸ್ ಅನ್ನು ಶೇಕಡಾ 70ಕ್ಕೆ ತಂದು ನಿಲ್ಲಿಸಿದ್ದಾರೆ. ಈ ವಿಚಾರವನ್ನು ನೇರವಾಗಿಯೇ ಹೇಳುತ್ತೇನೆ. ರಾಜ್ಯದಲ್ಲಿ ನಿತ್ಯ ನೂರಾರು ಜನರು ಕೋವಿಡ್‌ನಿಂದ ಮೃತಪಡುತ್ತಿದ್ದಾರೆ. ಜನರ ಜೀವ ಉಳಿಸುವ ಕಡೆ ಗಮನ ಹರಿಸುವ ಬದಲು ಪ್ರಚಾರಕ್ಕಾಗಿ ನಿತ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.ಪ್ರತಿಭಟನೆ ಮಾಡಿದ ತಕ್ಷಣ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿ.ಎಂ ಯಡಿಯೂರಪ್ಪ ಅಧಿಕಾರದಿಂದ ಕೆಳಗೆ ಇಳಿಯುತ್ತಾರಾ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

ಎಚ್.ಡಿ. ದೇವೇಗೌಡ ಅವರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ ಶಾಪ ಕಾಂಗ್ರೆಸ್‌ಗೆ ತಟ್ಟಿದೆ. ಹಾಗಾಗಿಯೇ ಪಕ್ಷಕ್ಕೆ ಈ ಸ್ಥಿತಿ ಬಂದಿದೆ. ಕಾಂಗ್ರೆಸ್ ಮುಖಂಡರೇ ರಾಜ್ಯದ ಮುಖ್ಯಮಂತ್ರಿ ಉಳಿಬೇಕು ಅಂತ ಹೇಳುತ್ತಿದ್ದಾರೆ. ಜೆಡಿಎಸ್ ಮುಗಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.