ಬುಧವಾರ, ಅಕ್ಟೋಬರ್ 21, 2020
25 °C

ಗೌಡರ ಹೆಗಲ ಮೇಲೆ ಕುಳಿತು ಡಿಸಿಎಂ ಆಗಿದ್ದ ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಎಚ್‌.ಡಿ.ದೇವೇಗೌಡರ ಹೆಗಲ ಮೇಲೆ ಕುಳಿತು ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿದ್ದು ಎಂಬುದನ್ನು ನೆನಪು ಮಾಡಿಕೊಳ್ಳಬೇಕು ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿರುಗೇಟು ನೀಡಿದರು.

‘ಜೆಡಿಎಸ್‌ ಒಂದು ರಾಜಕೀಯ ಪಕ್ಷವೇ ಅಲ್ಲ ಎಂಬ ಲಘುವಾದ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಸಮ್ಮಿಶ್ರ ಸರ್ಕಾರ ನಡೆಸಲು ಜೆಡಿಎಸ್‌ ಯಾರ ಬಳಿಯೂ ಹೋಗಿರಲಿಲ್ಲ. ಕಾಂಗ್ರೆಸ್‌ನವರೇ ನಮ್ಮ ಬಳಿ ಬಂದಿದ್ದರು. ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರೂ ಅಧಿಕಾರ ನಡೆಸಿದ್ದು ಕಾಂಗ್ರೆಸ್‌. ನಾವು ಅವರ ಹೆಗಲ ಮೇಲೆ ಕುಳಿತು ಅಧಿಕಾರ ಮಾಡಿಲ್ಲ. ಅವರೇ ನಮ್ಮ ಹೆಗಲ ಮೇಲೆ ಕುಳಿತು ಅಧಿಕಾರ ಮಾಡಿದರು’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

‘ಭಾವನಾತ್ಮಕ ಜೀವನ ನಡೆಸುವ ಕುಮಾರಸ್ವಾಮಿಗೆ ಜನರ ನೋವು ಕಂಡಾಗ ಕಣ್ಣೀರು ಬರುವುದು ಸಹಜ.
ಕಠಿಣ ಹೃದಯ ಹೊಂದಿರುವವರಿಗೆ ಬಡವರ ಭಾವನೆಗಳು ಅರ್ಥವಾಗುವುದಿಲ್ಲ’ಎಂದು ಟೀಕಿಸಿದರು.

ಶಿರಾ ಮತ್ತು ಆರ್.ಆರ್‌ .ನಗರ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಈಗಾಗಲೇ ಕ್ಷೇತ್ರದಲ್ಲಿ ಕಾರ್ಯಕರ್ತರು, ಮುಖಂಡರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಎರಡು ದಿನದಲ್ಲಿ ಹೆಸರು ಪ್ರಕಟಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು