ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ | ‘ಕೈ’ ಅಭ್ಯರ್ಥಿ ಶ್ರೇಯಸ್ ನಿವಾಸಕ್ಕೆ ಎಸ್‌ಐಟಿ ಅಧಿಕಾರಿಗಳ ಭೇಟಿ

Published 27 ಮೇ 2024, 1:11 IST
Last Updated 27 ಮೇ 2024, 1:11 IST
ಅಕ್ಷರ ಗಾತ್ರ

ಹೊಳೆನರಸೀಪುರ (ಹಾಸನ ಜಿಲ್ಲೆ): ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೇಯಸ್ ಎಂ. ಪಟೇಲ್ ಅವರ ನಿವಾಸಕ್ಕೆ ಶುಕ್ರವಾರ ಎಸ್‍ಐಟಿ ತಂಡ ಭೇಟಿ ನೀಡಿದೆ.

ವಕೀಲ ದೇವರಾಜೇಗೌಡ ಅವರು ಸುದ್ದಿಗೋಷ್ಠಿ ನಡೆಸಿ, ‘ಶ್ರೇಯಸ್ ಎಂ. ಪಟೇಲ್ ಅವರು ಕಾರ್ತಿಕ್‌ನನ್ನು ಹಾಸನದ ಹೋಟೆಲ್‌ನಲ್ಲಿ ಭೇಟಿ ಮಾಡಿದ್ದರು’ ಎಂದು ಆರೋಪಿಸಿದ್ದರು. ಈ ಆರೋಪವನ್ನು ಶ್ರೇಯಸ್ ಪಟೇಲ್ ನಿರಾಕರಿಸಿದ್ದರು. ಈ ಮಧ್ಯೆ ಪೆನ್‍ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೇಯಸ್ ಪಟೇಲ್‌ ಅವರ ನಿವಾಸಕ್ಕೆ ಎಸ್‌ಐಟಿ ಅಧಿಕಾರಿಗಳು ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ. ಪಟ್ಟಣದ ಕಾಂಗ್ರೆಸ್ ಮುಖಂಡರೊಬ್ಬರು ತಲೆಮರೆಸಿಕೊಂಡಿದ್ದು, ಈ ಬಗ್ಗೆ ಶ್ರೇಯಸ್ ಅವರ ವಿಚಾರಣೆ ನಡೆಸಿರಬಹುದು ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT