ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆನ್‌ಡ್ರೈವ್ ಪ್ರಕರಣ | ಹಾಸನಕ್ಕೆ ಮತ್ತೆ ಎಸ್‌ಐಟಿ ತಂಡ, ಪರಿಶೀಲನೆ

Published 28 ಮೇ 2024, 15:43 IST
Last Updated 28 ಮೇ 2024, 15:43 IST
ಅಕ್ಷರ ಗಾತ್ರ

ಹಾಸನ: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡ ಮಂಗಳವಾರ ಮತ್ತೊಮ್ಮೆ ಸ್ಥಳ ಪರಿಶೀಲನೆ ನಡೆಸಿತು.

ನಗರದ ಸಂಸದರ‌ ಸರ್ಕಾರಿ ನಿವಾಸ, ಹೊಳೆನರಸೀಪುರದ ಎಚ್.ಡಿ.ರೇವಣ್ಣ ‌ಅವರ ಮನೆ, ಚನ್ನರಾಯಪಟ್ಟಣ ತಾಲ್ಲೂಕಿನ ಗನ್ನಿಕಡ ಫಾರ್ಮ್‌ ಹೌಸ್‌ಗೆ ತಂಡ ಭೇಟಿ ನೀಡಿತು.

ಈ ಹಿಂದೆ ಕೂಡ ಸ್ಥಳ ಮಹಜರು ನಡೆಸಿದ್ದ ಅಧಿಕಾರಿಗಳು, ಮಂಗಳವಾರ ಎಸಿಪಿ ಸತ್ಯನಾರಾಯಣ ನೇತೃತ್ವದಲ್ಲಿ ಏಕಕಾಲದಲ್ಲಿ ಮೂರು ಕಡೆಗಳಲ್ಲಿ ಪರಿಶೀಲನೆ ನಡೆಸಿದರು.

ಮೇ 31ರಂದು ಎಸ್‌ಐಟಿ ಮುಂದೆ ಹಾಜರಾಗುವುದಾಗಿ ಹೇಳಿದ ಪ್ರಜ್ವಲ್‌ ರೇವಣ್ಣ ಅವರ ವಿಡಿಯೊ ಹೇಳಿಕೆ ಬೆನ್ನಲ್ಲೇ, ತಂಡದ ಪರಿಶೀಲನೆ ಕುತೂಹಲ ಕೆರಳಿಸಿದೆ.

ಈ ಮಧ್ಯೆ, ‘ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಮತ್ತಷ್ಟು ವಿಡಿಯೊಗಳನ್ನು ಹಂಚಲಾಗುತ್ತಿದೆ’ ಎನ್ನುವ ವದಂತಿಗಳು ಜಿಲ್ಲೆಯಲ್ಲಿ ಹರಿದಾಡುತ್ತಿವೆ. ಆದರೆ, ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT