ಮಂಗಳವಾರ, ಸೆಪ್ಟೆಂಬರ್ 29, 2020
29 °C

ಹಾಸನ | ಜಿಲ್ಲೆಯಲ್ಲಿ ಮತ್ತೆ ಆರು ಮಂದಿ ಸಾವು; ಹೊಸದಾಗಿ 137 ಕೋವಿಡ್–ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಜಿಲ್ಲೆಯಲ್ಲಿ ಕೋವಿಡ್‌ ಕಾಯಿಲೆಗೆ ಶನಿವಾರ ಮತ್ತೆ ಆರು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಈ ವರೆಗೆ ಅಸುನೀಗಿದವರ ಸಂಖ್ಯೆ 94 ತಲುಪಿದೆ.

ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅರಸೀಕೆರೆ ತಾಲ್ಲೂಕಿನ 55 ವರ್ಷದ ವ್ಯಕ್ತಿ, ಚನ್ನರಾಯಪಟ್ಟಣ ತಾಲ್ಲೂಕಿನ 65, 55 ವರ್ಷದ ಮಹಿಳೆ, 55 ವರ್ಷದ ಪುರುಷ ಹಿಮ್ಸ್ ಆಸ್ಪತ್ತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೊಳೆನರಸೀಪುರ ತಾಲ್ಲೂಕಿನ 38 ವರ್ಷ ಹಾಗೂ ಬೇಲೂರು ತಾಲ್ಲೂಕಿನ 49 ವರ್ಷದ ವ್ಯಕ್ತಿಗೂ ಉಸಿರಾಟದ ಸಮಸ್ಯೆ ಇತ್ತು. ಎಲ್ಲರಿಗೂ ಕೋವಿಡ್ ದೃಢಪಟ್ಟಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಹೊಸದಾಗಿ 136 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 3294 ಕ್ಕೆ ಏರಿಕೆಯಾಗಿದೆ. ಈವರೆಗೆ 1247 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1953 ಸಕ್ರಿಯ ಪ್ರಕರಣಗಳಿವೆ. ತೀವ್ರ ನಿಗಾ ಘಟಕದಲ್ಲಿ 41 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಹಾಸನ ತಾಲ್ಲೂಕಿನ 43, 53 ಹಾಗೂ 62 ವರ್ಷದ ಪುರುಷರು, ಚನ್ನರಾಯಪಟ್ಟಣ
ತಾಲ್ಲೂಕಿನ 50 ವರ್ಷದ ಮಹಿಳೆ, ಹೊಳೆನರಸಿಪುರ ತಾಲ್ಲೂಕಿನ 35 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಉಳಿದ
ಬಹುತೇಕ ಪ್ರಕರಣಗಳಲ್ಲಿ ಸೋಂಕಿತರ ಸಂಪರ್ಕ, ಉಸಿರಾಟದ ಸಮಸ್ಯೆ, ಕೆಮ್ಮು, ಶೀತ, ಜ್ವರದಿಂದ ಬಳಲುತ್ತಿದ್ದವರಿಗೂ ಪಾಸಿಟಿವ್‌ ಬಂದಿದೆ. ಕೆಲ ಪ್ರಕರಣಗಳಲ್ಲಿ ಸೋಂಕಿನ ಮೂಲ ಪತ್ತೆ ಆಗಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಹೇಳಿದರು.

ಅರಸೀಕೆರೆ 17, ಚನ್ನರಾಯಪಟ್ಟಣ 22, ಹಾಸನ 74, ಹೊಳೆನರಸೀಪುರ 11, ಅರಕಲಗೂಡು 2, ಬೇಲೂರು 5 ,
ಸಕಲೇಶಪುರ 3, ಆಲೂರು ಹಾಗೂ ಹೊರ ಜಿಲ್ಲೆಯ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು