ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿಗೆ ಆರು ಮಂದಿ ಸಾವು

ಎಸ್ಪಿ ಶ್ರೀನಿವಾಸ್‌ಗೌಡಗೆ ಕೊರೊನಾ ಪಾಸಿಟಿವ್‌‌
Last Updated 17 ಏಪ್ರಿಲ್ 2021, 12:02 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಶನಿವಾರ ಒಂದೇ ದಿನ 216 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 31595ಕ್ಕೆ ಏರಿಕೆಯಾಗಿದ್ದು, 29,616 ಜನರ ಆರೋಗ್ಯದಲ್ಲಿ ಚೇತರಿಕೆಯಾಗಿದೆ. 1486 ಸಕ್ರಿಯ ಪ್ರಕರಣಗಳಲ್ಲಿ 23 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚನ್ನರಾಯಪಟ್ಟಣದ ಮೂವರು, ಅರಸೀಕೆರೆ, ಹಾಸನ, ಸಕಲೇಶಪುರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಕಾಯಿಲೆಯಿಂದ ಈವರೆಗೆ 493 ಮಂದಿ ಅಸುನೀಗಿದ್ದಾರೆ.

ಹೊಸದಾಗಿ ಆಲೂರು 8 , ಅರಕಲಗೂಡು 8, ಅರಸೀಕೆರೆ 51, ಬೇಲೂರು 7, ಚನ್ನರಾಯಪಟ್ಟಣ 57, ಹಾಸನ 59, ಹೊಳೆನರಸೀಪುರ 15, ಸಕಲೇಶಪುರ 9 ಹಾಗೂ ಇತರೆ ಜಿಲ್ಲೆಯ ಇಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‌ ಕುಮಾರ್‌ ತಿಳಿಸಿದ್ದಾರೆ.

ಪೊಲೀಸ್‌ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್‌ ಗೌಡ ಅವರಿಗೆ ಕೋವಿಡ್ 19 ದೃಢಪಟ್ಟಿದೆ. ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದರು.

‘ಯಾವುದೇ ರೋಗಗಳಲ್ಲದಿದ್ದರೂ ಕೊರೊನಾ ಪಾಸಿಟಿವ್‌ ವರದಿ ಬಂದಿದ್ದು, ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದ ಅಧಿಕಾರಿಗಳು ಹಾಗೂ ಕಚೇರಿಗೆ ಭೇಟಿ ನೀಡಿದ ಸಾರ್ವಜನಿಕರು ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ಅವರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT