ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಜಿಲ್ಲೆಯಲ್ಲಿ ಆರು ಸಾವಿರ ಸಕ್ರಿಯ ಪ್ರಕರಣ

Last Updated 1 ಮೇ 2021, 14:09 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಶನಿವಾರ ಒಂದೇ ದಿನ 349 ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ 9 ಮಂದಿ ಮೃತಪಟ್ಟಿದ್ದಾರೆ.

ಎರಡು ದಿನಗಳಿಂದ ಸೋಂಕಿತ ಸಂಖ್ಯೆಯಲ್ಲಿ ಅಲ್ಪ ಇಳಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ638ಕ್ಕೆ ಏರಿಕೆಯಾಗಿದೆ. 77 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಹತ್ತು ದಿನಗಳಲ್ಲಿ 107 ಜನರು ಸೋಂಕಿಗೆ ಅಸುನೀಗಿದ್ದಾರೆ. ಈವರೆಗೆ ಕಾಯಿಲೆಗೆ ಮೃತಪಟ್ಟವರ ಸಂಖ್ಯೆ 590ಕ್ಕೆ ಏರಿಕೆಯಾಗಿದೆ.

ಹಾಸನ ತಾಲ್ಲೂಕಿನಲ್ಲಿ ಅತಿ ಹೆಚ್ಚು ಸೋಂಕಿತರು ಹಾಗೂ ಸಾವಿನ ಪ್ರಮಾಣ ವರದಿಯಾಗಿದೆ.

ಹೊಸದಾಗಿ ಆಲೂರು ತಾಲ್ಲೂಕು 12, ಅರಕಲಗೂಡು 25, ಅರಸೀಕೆರೆ 29, ಬೇಲೂರು 37, ಚನ್ನರಾಯಪಟ್ಟಣ 28, ಹಾಸನ 125, ಹೊಳೆನರಸೀಪುರ 14, ಸಕಲೇಶಪುರ 66, ಇತರೆ ಜಿಲ್ಲೆಯ 13 ಜನರಿಗೆ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕೆ.ಎಂ.ಸತೀಶ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT