ಶನಿವಾರ, ಸೆಪ್ಟೆಂಬರ್ 18, 2021
27 °C

ಕೆಸರು ಗದ್ದೆಯೋ? ತರಕಾರಿ ಮಾರುಕಟ್ಟೆಯೋ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಳೆನರಸೀಪುರ: ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಬೀಳುತ್ತಿದ್ದು ಕವರ್‌ಡಕ್ ಮೇಲಿನ ತರಕಾರಿ ಮಾರುಕಟ್ಟೆ ಸಂಪೂರ್ಣ ರಾಡಿ ತುಂಬಿ ಕೆಸರು ಗದ್ದೆಯಂತಾಗಿದೆ.

ರಾಡಿಮಯ ವಾತಾವರಣದಿಂದ ಇಲ್ಲಿನ ಅಂಗಡಿಯವರಿಗೆ ಮತ್ತು ಖರೀದಿಗೆ ಬರುವ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಕೆಲವು ತಿಂಗಳ ಹಿಂದೆ ಕವರ್‌ಡಕ್ ಮೇಲಿನ ಮಾರುಕಟ್ಟೆ ಒಳಗೆ ಹೊಸದಾಗಿ ಡಾಂಬರು ಹಾಕಲಾಗಿತ್ತು. ಡಾಂಬರು ಕೆಲವೇ ದಿನಕ್ಕೆ ಕುಡಿಯುವ ನೀರಿನ ಪೈಪ್‌ಲೈನ್‌ ಅಳವಡಿಸಲು ರಸ್ತೆ ಅಗೆದರು. ಪೈಪ್ ಅಳವಡಿಸಿದ ನಂತರ ಗುಂಡಿಯನ್ನು ಸರಿಯಾಗಿ ಮುಚ್ಚದೆ ಬಿಟ್ಟಿದ್ದರಿಂದ ಈ ಸ್ಥಿತಿ ನಿರ್ಮಾಣವಾಗಿದೆ.

‘ರಸ್ತೆ ಹದಗಟ್ಟೆ ಬಗ್ಗೆ ‘ಪ್ರಜಾವಾಣಿ’ ವರದಿ ಮಾಡಿದ್ದಾಗ ಹೊಸ ಡಾಂಬರು ರಸ್ತೆಯನ್ನು ಅಗೆದ ಗುತ್ತಿಗೆದಾರನಿಂದ ಡಾಂಬರು ಹಾಕಿಸುವುದಾಗಿ ಹೇಳಿದ್ದ ಪುರಸಭೆ ಮುಖ್ಯಾಧಿಕಾರಿ ಶಾಂತಲಾ ಅವರು ಇನ್ನೂ ಕೆಲಸ ಮಾಡಿಸಿಲ್ಲ’ ಎಂದು ಸಾರ್ವಜನಿಕರು ದೂರಿದ್ದಾರೆ.

‘ಈ ಬಗ್ಗೆ ಪುರಸಭೆ ಗಮನಹರಿಸಿ ಅವ್ಯವಸ್ಥೆಯನ್ನು ಸರಿಪಡಿಸಿ ಸಾರ್ವಜನಿಕರಿಗೆ ಹಾಗೂ ಅಂಗಡಿಯವರಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕು’ ಎಂದು ನಾಗರಿಕರು ಆಗ್ರಹಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.