ಹೊಳೆನರಸೀಪುರ: ಪಟ್ಟಣದ ಸೋಷಿಯಲ್ ಕ್ಲಬ್ ನೂತನ ಅಧ್ಯಕ್ಷರಾಗಿ ಉದ್ಯಮಿ ಕೆ.ಎಂ. ಹೊನ್ನಪ್ಪ ಆಯ್ಕೆ ಆಗಿದ್ದಾರೆ.
ಇತ್ತೀಚೆಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಕಾರ್ಯದರ್ಶಿಯಾಗಿ ಕೆ.ಎ. ಸುದರ್ಶನ್‌ಬಾಬು, ಖಜಾಂಚಿಯಾಗಿ ವಿಜಯಕುಮಾರ್ ಸರ್ವಾನುಮತದಿಂದ ಆಯ್ಕೆ ಆಗಿದ್ದಾರೆ ಎಂದು ಅಧ್ಯಕ್ಷ ಹೊನ್ನಪ್ಪ ತಿಳಿಸಿದ್ದಾರೆ.
ನಮ್ಮ ಕ್ಲಬ್ ಆರಂಭದ ದಿನದಿಂದ ಅನೇಕ ಸಮಾಜ ಸೇವಾ ಕಾರ್ಯಗಳನ್ನು ಮಾಡುತ್ತಿದೆ. ಪ್ರತಿವರ್ಷ ಸ್ವಾತಂತ್ರ್ಯೋತ್ಸವ ಕಾಯಕ್ರಮದಲ್ಲಿ ಭಾಗವಹಿಸುವ ಸಾವಿರಾರು ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಅಧಿಕಾರಿಗಳಿಗೆ ಉಪಾಹಾರದ ವ್ಯವಸ್ಥೆ ಮಾಡಲಾಗುತ್ತಿದೆ. ಈ ಸೇವೆಯನ್ನು ಮುಂದುವರಿಸುತ್ತೇವೆ. ಇದೇ ರೀತಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಕ್ಲಬ್ ಸದಸ್ಯರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಹೊಸವರ್ಷ ಆಚರಣೆಯ ಕಾರ್ಯಕ್ರಮಗಳನ್ನು ಮುಂದುವರಿಸುವುದರ ಜೊತೆಗೆ ಈ ಬಾರಿ ಕ್ರೀಡೆಗೆ ಹೆಚ್ಚಿನ ಪ್ರೋತಾಹ ನೀಡುವ ಕಾಯಕ್ರಮಗಳನ್ನು ಸದಸ್ಯರ ಅಭಿಪ್ರಾಯ ಪಡೆದು ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.