ಸೊಳ್ಳೆ ಪರದೆ ಬಳಸಿ ಕಾಯಿಲೆಯಿಂದ ದೂರವಿರಿ

ಮಂಗಳವಾರ, ಜೂಲೈ 16, 2019
26 °C
ಮಲೇರಿಯಾ ವಿರೋಧ ಮಾಸಾಚರಣೆ ಕಾರ್ಯಕ್ರಮದಲ್ಲಿ ಸಿಇಒ ವಿಜಯ ಪ್ರಕಾಶ್‌

ಸೊಳ್ಳೆ ಪರದೆ ಬಳಸಿ ಕಾಯಿಲೆಯಿಂದ ದೂರವಿರಿ

Published:
Updated:
Prajavani

ಹಾಸನ: ಮಲೇರಿಯಾ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮೂಲಕ ಕಾಯಿಲೆಗಳು ಬಾರದಂತೆ ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎನ್‌.ವಿಜಯ ಪ್ರಕಾಶ್ ತಿಳಿಸಿದರು.

ನಗರದ ಗಂಧದ ಕೋಠಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು (ವಿಭಜಿತ) ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಮಲೇರಿಯಾ ನಿಯಂತ್ರಣಾ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಲೇರಿಯಾ ತಡೆಗೆ ಇಲಾಖೆಗಳೊಂದಿಗೆ ಜಾಗೃತಿ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಕೈಜೋಡಿಸಬೆಕು.
ಸ್ವಚ್ಛತೆಗೆ ಗಮನ ಹರಿಸಬೇಕು. ಸೊಳ್ಳೆಗಳ ಉತ್ಪತ್ತಿ ತಡೆಗೆ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಹಾಗೂ ಮನೆಗಳಲ್ಲಿ ಸೊಳ್ಳೆ ಪರದೆಗಳನ್ನು ಬಳಸಿ ಕಾಯಿಲೆಗಳಿಂದ ದೂರವಿರಬೇಕು ಎಂದರು.

ಜ್ವರ, ಮೈ ಕೈ ನೋವು, ಮೈ ನಡುಕ ಲಕ್ಷಣ ಕಂಡು ಬಂದಲ್ಲಿ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಲು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ರಾಜ್ ಗೋಪಾಲ್, ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ. ನಾಗೇಶ್ ಆರಾಧ್ಯ, ವಿಭಜಿತ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಪಿ. ಸುರೇಶ್ ಭಾಗವಹಿಸಿದ್ದರು.

ಜಾಥಾವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಲೇರಿಯಾ ನಿಯಂತ್ರಣ ಕ್ರಮಗಳ ಬಗ್ಗೆ ಅರಿವು ಮೂಡಿಸಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !