ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುತ್ತಿಗೆ ಕಾರ್ಮಿಕರ ಸಮಸ್ಯೆಗೆ ಪರಿಹಾರ: ಶಾಸಕ ಪ್ರೀತಂ ಜೆ.ಗೌಡ ಭರವಸೆ

ಸಮ್ಮೇಳನದಲ್ಲಿ ಶಾಸಕ ಪ್ರೀತಂ ಜೆ.ಗೌಡ ಭರವಸೆ
Last Updated 7 ಫೆಬ್ರುವರಿ 2021, 14:01 IST
ಅಕ್ಷರ ಗಾತ್ರ

ಹಾಸನ: ನಗರ ಮತ್ತು ಸ್ಥಳೀಯ ಸಂಸ್ಥೆಗಳ ಗುತ್ತಿಗೆ ಕಾರ್ಮಿಕರ ಸಮಸ್ಯೆಗಳ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಬಗೆಹರಿಸಲಾಗುವುದು ಎಂದು ಶಾಸಕ ಪ್ರೀತಂ ಜೆ. ಗೌಡ ಭರವಸೆ ನೀಡಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ವಾಹನ ಚಾಲಕರು, ವಾಟರ್ ಮೆನ್, ಒಳಚರಂಡಿ ಮತ್ತು ಡಾಟಾ ಎಂಟ್ರಿ ಆಪರೇಟರ್‌ಗಳ ಸಂಘದ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರಥಮ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಮುಂದಿನ ದಿನಗಳಲ್ಲಿ ಎಲ್ಲಾ ನೌಕರರು ವ್ಯವಸ್ಥಿತವಾಗಿ ಸಂಘಟನೆ ಮಾಡಿಕೊಂಡು, ತಮ್ಮ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳಿಗೆ ಮನದಟ್ಟು ಮಾಡಿದರೇ ಖಂಡಿತವಾಗಿಯೂ ಕೆಲಸ ಆಗುತ್ತದೆ. ಬಜೆಟ್ ನಂತರ ಎಲ್ಲಾ ಹೊರ ಗುತ್ತಿಗೆ ನೌಕರರ ಬ್ಯಾಂಕ್‌ ಖಾತೆಗೆ ನೇರ ಪಾವತಿ ಮಾಡುವ ವ್ಯವಸ್ಥೆ ಮಾಡಲಾಗುವುದು. ಸಮಸ್ಯೆಗಳ ಬಗ್ಗೆ ಪಕ್ಷತೀತಾವಾಗಿ ಮನವಿ ಸಲ್ಲಿಸಿದರೆ, ಶಕ್ತಿ ಮೀರಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ನುಡಿದರು.

ಪೌರಕಾರ್ಮಿಕ ಸಂಘದ ರಾಜ್ಯಾಧ್ಯಕ್ಷ ನಾರಾಯಣ ಸ್ವಾಮಿ ಮಾತನಾಡಿ, ಹೊರ ಗುತ್ತಿಗೆ ನೌಕರರ ಮೇಲೆ ಶೋಷಣೆ ನಡೆಯುತ್ತಿದೆ. ಪೌರಕಾರ್ಮಿಕರ ರೀತಿ ಸೌಲಭ್ಯ ನೀಡದೆ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಆದ್ದರಿಂದ ಸರ್ಕಾರದ ಮಟ್ಟದಲ್ಲಿ ಗಮನ ಸೆಳೆದು, ನ್ಯಾಯಯುತ ಬೇಡಿಕೆ ಈಡೇರಿಸಿಕೊಳ್ಳಲು ಸಂಘಟನೆ ಅತಿ ಮುಖ್ಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಸ್ಥಳಿಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ. ನಾಗಣ್ಣಗೌಡ, ನಗರಸಭೆ ಸದಸ್ಯ ಸಿ.ಆರ್. ಶಂಕರ್, ಮದ್ದೂರು ಪುರಸಭೆ ಸದಸ್ಯೆ ಪ್ರಿಯಾಂಕ ಅಪ್ಪುಗೌಡ, ಜಿಲ್ಲಾಧ್ಯಕ್ಷ ಧರ್ಮರಾಜ್, ನೀರು ಸರಬರಾಜು ವಿಭಾಗದ ಆನಂದಗಿರಿ, ಡಾಟಾ ಎಂಟ್ರಿ ಆಪರೇಟರ್ ವಿಭಾಗದ ಪ್ರಕಾಶ್, ಉಪಾಧ್ಯಕ್ಷ ರಜಿನಿಕಾಂತ್, ಮದ್ದೂರ್ ಶ್ರೀನಿವಾಸ್, ಪ್ರಸನ್ನ, ದಿನೇಶ್, ಮೋಹನ್, ಪತ್ರಕರ್ತರಾದ ಆರ್.ಪಿ. ವೆಂಕಟೇಶ್ ಮೂರ್ತಿ, ಹೆತ್ತೂರು ನಾಗರಾಜ್, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT