ಬುಧವಾರ, ಅಕ್ಟೋಬರ್ 21, 2020
22 °C

ಪಿಡಿಒಗಳು ರಾಕ್ಷಸರು: ಸಚಿವ ಸೋಮಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ‘ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಮಾಡುವ ಪಾಪದ ಕೆಲಸಕ್ಕೆ ನೀವು ಹೊಣೆಗಾರರಾಗಬೇಡಿ. ನಿಮ್ಮ ಪಾಪಗಳನ್ನು ಇನ್ನಾದರೂ ತೊಳೆದುಕೊಳ್ಳಿ. ಇಷ್ಟೆಲ್ಲಾ ಹೇಳಿದರೂ ಅರ್ಥ ಮಾಡಿಕೊಳ್ಳದಿದ್ದರೆ ದೇವರು ಕ್ಷಮಿಸಲ್ಲ. ಪಿಡಿಒಗಳು ರಾಕ್ಷಸರು’ ಎಂದು ವಸತಿ ಸಚಿವ ವಿ.ಸೋಮಣ್ಣ ಹರಿಹಾಯ್ದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ವಿವಿಧ ವಸತಿ ಯೋಜನೆಗಳ ಅನುಷ್ಠಾನ ಮತ್ತು ಅಭಿವೃದ್ಧಿ ಕಾಮಗಾರಿಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

‘ಕಾರ್ಯನಿರ್ವಾಹಕ ಅಧಿಕಾರಿಗಳು ಹೇಳಿದ್ದೇ ಶಾಸನವಲ್ಲ. ಏನ್ ಮಾಡ್ತಿರೋ ಗೊತ್ತಿಲ್ಲ. ನನಗೆ ರಿಸಲ್ಟ್ ಬೇಕು. ಬಡವರ ಹೊಟ್ಟೆ ಉರಿಸಬೇಡಿ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು