ಮಂಗಳವಾರ, ಜೂನ್ 28, 2022
23 °C
ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡರ ಜನ್ಮದಿನ

ದೇಗುಲದಲ್ಲಿ ವಿಶೇಷ ಪೂಜೆ; ದರ್ಗಾದಲ್ಲಿ ಪ್ರಾರ್ಥನೆ

ಪ‍್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ 90ನೇ ವರ್ಷದ ಜನ್ಮದಿನದ ಅಂಗವಾಗಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಬುಧವಾರ ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ನೀರುಬಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ದೇವೇಗೌಡರ ಆಯುಸ್ಸು‌, ಆರೋಗ್ಯವೃದ್ಧಿಗಾಗಿ ಅರ್ಚನೆ ಮಾಡಿಸಿ, ಸಿಹಿ ಹಂಚಿ, ಈಡುಗಾಯಿ ಒಡೆದು ಪ್ರಾರ್ಥಿಸಲಾಯಿತು. ನಂತರ ಆಜಾದ್ ರಸ್ತೆಯಲ್ಲಿರುವ ದರ್ಗಾದಲ್ಲೂ ಪ್ರಾರ್ಥನೆ ಸಲ್ಲಿಸಿದರು.

ಹಿರಿಯ ಮುಖಂಡ ಕೆ.ಎಂ.ರಾಜೇಗೌಡ, ಯುವ ಮುಖಂಡ ಹಾಗೂ ಸ್ವರೂಪ್ ಎಚ್.ಪಿ., ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್‌.ದ್ಯಾವೇಗೌಡ, ಎಚ್‍ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಜಯರಾಂ, ಕಾರ್ಲೆ ಇಂದ್ರೇಶ್, ನಗರಸಭೆ ಮಾಜಿ ಅಧ್ಯಕ್ಷ ಅನಿಲ್‌ಕುಮಾರ್, ಸದಸ್ಯರಾದ ವಾಸುದೇವ್, ಸಿ.ಆರ್.ಶಂಕರ್, ಚಂದ್ರೇಗೌಡ, ಜಿಲ್ಲಾ ಜೆಡಿಎಸ್ ಜಿಲ್ಲಾ ವಕ್ತಾರ ಹೊಂಗೆರೆ ರಘು ಹಾಜರಿದ್ದರು.

‘ಅಲ್ಪಕಾಲವಷ್ಟೇ ಅಧಿಕಾರದಲ್ಲಿದ್ದರೂ ಕರ್ನಾಟಕ ಮತ್ತು ಭಾರತಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದ್ದಾರೆ. ಕಾಯಾ ವಾಚಾ, ಮನಸಾ ಜನರ ಉದ್ಧಾರಕ್ಕಾಗಿ ಶ್ರಮಿಸಿದ ದೇವೇಗೌಡರು ಭಾರತದ ರಾಜಕೀಯ ಕರ್ಮಯೋಗಿ. 90ರ ಹರೆಯದಲ್ಲೂ ಜನರಪರ ಹೋರಾಟ ನಡೆಸುತ್ತಿರುವ ಧಣಿವರಿಯದ ಕಾಯಕಯೋಗಿ’ ಎಂದು ಎಚ್.ಡಿ.ಕುಮಾರಸ್ವಾಮಿ ಗುಣಗಾನ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.