ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಧರ್ಮಸ್ಥಳ ಯೋಜನಾ ಕಚೇರಿ ವ್ಯಾಪ್ತಿ 5 ಸರ್ಕಾರಿ ಪ್ರೌಢಶಾಲೆ

Published 24 ಡಿಸೆಂಬರ್ 2023, 13:26 IST
Last Updated 24 ಡಿಸೆಂಬರ್ 2023, 13:26 IST
ಅಕ್ಷರ ಗಾತ್ರ

ನುಗ್ಗೇಹಳ್ಳಿ: ‘ವಿದ್ಯಾರ್ಥಿಗಳಿಗೆ ಮುಂಬರುವ ಎಸ್ಎಸ್ಎಲ್‌‌‌ಸಿ ವಾರ್ಷಿಕ ಪರೀಕ್ಷೆಗೆ ಅನುಕೂಲವಾಗುವ ದೃಷ್ಟಿಯಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರವಣಬೆಳಗೊಳ ಯೋಜನಾ ಕಚೇರಿಯಿಂದ 5 ಸರ್ಕಾರಿ ಪ್ರೌಢಶಾಲೆ ಆಯ್ಕೆ ಮಾಡಿಕೊಂಡು ಟ್ಯೂಷನ್ ಕ್ಲಾಸ್ ವ್ಯವಸ್ಥೆ ಮಾಡಲಾಗಿದೆ’ ಎಂದು ಶ್ರವಣಬೆಳಗೊಳ ಯೋಜನಾ ಕಚೇರಿ ಯೋಜನಾಧಿಕಾರಿ ಸದಾಶಿವ ಕುಲಾಲ್ ತಿಳಿಸಿದರು.

ಹೋಬಳಿ ಹಾರೋ ಸೋಮನಹಳ್ಳಿ ಪ್ರೌಢಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಎಸ್ಎಸ್ಎಲ್‌‌‌ಸಿ ಮಕ್ಕಳಿಗೆ ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಹಮ್ಮಿಕೊಂಡಿದ್ದ ಟ್ಯೂಷನ್ ಕ್ಲಾಸ್ ಮತ್ತು ಸ್ವಸ್ಥ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಯೋಜನೆಯಿಂದ ಶಾಲೆಗಳಿಗೆ ಬೆಂಚ್ ಡೆಸ್ಕ್ ಶಾಲಾ ಕಟ್ಟಡ ಕಾಂಪೌಂಡ್ ಶೌಚಾಲಯ ಆಟದ ಮೈದಾನ ನಿರ್ಮಾಣಕ್ಕೆ ಸಹಾಯಧನ ನೀಡಲಾಗುತ್ತಿದೆ ಮತ್ತು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಕೃಷಿ ಚಟುವಟಿಕೆಗಳಿಗೆ ಸಾಲ ಪಡೆಯುವ ಸದಸ್ಯರಿಗೆ ಸಹಾಯಧನ ಕೊಡಲಾಗುತ್ತಿದ್ದು ಪರಮಪೂಜ್ಯ ಡಾ.ವೀರೇಂದ್ರ ಹೆಗಡೆ ಅವರ ಮಾರ್ಗದರ್ಶನದಂತೆ ಯೋಜನೆ ಮೂಲಕ ಅನೇಕ ಜನಸ್ನೇಹಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.

ಮುಖ್ಯ ಶಿಕ್ಷಕ ಎಚ್.ಎಂ.ನಾಗರಾಜ್ ಮಾತನಾಡಿ,‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸರ್ಕಾರಿ ಪ್ರೌಢ ಶಾಲೆಯ ಎಸ್ಎಸ್ಎಲ್‌‌‌ಸಿ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲೆಂದು ಟ್ಯೂಷನ್ ಕ್ಲಾಸ್ ಆಯೋಜನೆ ಮಾಡಿರುವುದು ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಲು ಅನುಕೂಲವಾಗಲಿದೆ. ಇದರ ಜೊತೆಗೆ ಮಕ್ಕಳಲ್ಲಿ ದುಶ್ಚಟಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಸಂಪನ್ಮೂಲ ವ್ಯಕ್ತಿಗಳಿಂದ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮದ ಮೂಲಕ ಅರಿವು ಮೂಡಿಸುತ್ತಿರುವುದು ಉತ್ತಮ ಕೆಲಸ’ ಎಂದರು.

ಟ್ಯೂಷನ್ ಕ್ಲಾಸ್ ಅಂಗವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಎಸ್ಎಸ್ಎಲ್‌‌‌ಸಿ ಮಕ್ಕಳಿಗೆ ನೋಟ್ ಬುಕ್ ಪೆನ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಯೋಜನೆಯ ಕೃಷಿ ಅಧಿಕಾರಿ ಮಾದೇವ ಪ್ರಸಾದ್, ಕಲ್ಕೆರೆ ವಲಯ ಮೇಲ್ವಿಚಾರಕ ರಮೇಶ್, ಶಿಕ್ಷಕರಾದ ಮೋಹನ್, ಶಿವರಾಜ್, ನಾಗೇಶ್, ಮಂಜುನಾಥ್, ಸೇವಾ ಪ್ರತಿನಿಧಿ ಅನಿತಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT