ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಸನ | SSLC - 20,472 ವಿದ್ಯಾರ್ಥಿಗಳು: 73 ಪರೀಕ್ಷಾ ಕೇಂದ್ರ

ಏ.25 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ವೆಬ್‌ ಕಾಸ್ಟಿಂಗ್ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ
Published 21 ಮಾರ್ಚ್ 2024, 14:01 IST
Last Updated 21 ಮಾರ್ಚ್ 2024, 14:01 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.25 ರಿಂದ ಏ.6 ರವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ 20,472 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಗುರುವಾರ ಪರೀಕ್ಷಾ ಸಿದ್ಧತೆಗಳ ಬಗ್ಗೆ ಪರಿಶೀಲಿಸಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಆಸನಗಳ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು, ಶೌಚಾಲಯ, ಸೂಕ್ತ ಗಾಳಿ ಬೆಳಕಿನ ವ್ಯವಸ್ಥೆ, ಪರೀಕ್ಷೆ ನಡೆಯುವ ಎಲ್ಲ ಕೊಠಡಿಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರವು ಇಂಟರ್‌ನೆಟ್ ಸೌಲಭ್ಯ ಹೊಂದಿರಬೇಕು. ಕೇಂದ್ರದಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಬೇಕು. ಜಿಲ್ಲಾ ಹಂತದಲ್ಲಿ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಿ, ಪರಿಶೀಲನೆಗೆ ತ್ರಿಸದಸ್ಯ ಸಮಿತಿ ರಚನೆ ಮಾಡಬೇಕು. ಪ್ರಶ್ನೆ ಪತ್ರಿಕೆ ಸರಬರಾಜು ಮಾಡಲು ಮಾರ್ಗಾಧಿಕಾರಿಗಳ ನೇಮಕ, ಪರೀಕ್ಷಾ ಕೇಂದ್ರಕ್ಕೆ ಸ್ಥಾನಿಕ ಜಾಗೃತ ದಳ ನೇಮಕ, ಪರೀಕ್ಷಾ ಕೊಠಡಿ ಮೇಲ್ವಿಚಾರಕರನ್ನು ಸಂಬಂಧಿಸಿದ ವಿಷಯ ಶಿಕ್ಷಕರನ್ನು ಹೊರತುಪಡಿಸಿ ನೇಮಕ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜವರೇಗೌಡ  ಮಾತನಾಡಿ, ಜಿಲ್ಲೆಯಲ್ಲಿ 537 ಶಾಲೆಗಳು ನೋಂದಣಿಯಾಗಿದ್ದು,  73 ಪರೀಕ್ಷಾ ಕೇಂದ್ರಗಳಿವೆ. 14 ಜನ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, 14 ಪರೀಕ್ಷಾ ಕೇಂದ್ರದ ಉಪ ಮುಖ್ಯ ಅಧೀಕ್ಷಕರು, 73 ಪರೀಕ್ಷಾ ಕೇಂದ್ರದ ಕಸ್ಟೋಡಿಯನ್, 73 ಪರೀಕ್ಷಾ ಕೇಂದ್ರದ ಮೊಬೈಲ್ ಸ್ವಾಧೀನಾಧಿಕಾರಿ,  27 ಪರೀಕ್ಷಾ ಕೇಂದ್ರದ ಮಾರ್ಗಾಧಿಕಾರಿ, 81 ಪರೀಕ್ಷಾ ಕೇಂದ್ರದ ಸ್ಥಾನಿಕ ಜಾಗೃತದಳ, 8 ತಾಲ್ಲೂಕಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಕೊಠಡಿ ಮೇಲ್ವಿಚಾರಕರ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ನಾಗೇಶ್ ಎ. ರಾಯ್ಕರ್ ಮಾತನಾಡಿ, ಶಾಲಾ ಪರೀಕ್ಷಾ ಕೊಠಡಿಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಪರೀಕ್ಷಾ ಕೊಠಡಿಯಲ್ಲಿ ಹಾಕಬೇಕು ಎಂದು ತಿಳಿಸಿದರು.

ಶಿಕ್ಷಣ ಶಿಕ್ಷಕರ ತರಬೇತಿ ಮಹಾವಿದ್ಯಾಲಯ ಪ್ರಾಂಶುಪಾಲ ಸೋಮಶೇಖರ್, ಡಯಟ್‍ನ ಪ್ರಾಂಶುಪಾಲೆ ಪುಷ್ಪಲತಾ ಮಾತನಾಡಿದರು. ಜಿಲ್ಲೆಯ ಎಲ್ಲ ತಾಲ್ಲೂಕಿನ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪರೀಕ್ಷೆಗೆ ನಿಯೋಜನೆಗೊಂಡ ಸಿಬ್ಬಂದಿ ಉಪಸ್ಥಿತರಿದ್ದರು.

ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ

ಹಾಸನ: ಜಿಲ್ಲೆಯ 73 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗಳು ಸುಗಮವಾಗಿ ನಡೆಸಲು 144 ಕಲಂ ಅಡಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಇರುವ ಜೆರಾಕ್ಸ್ ಅಂಗಡಿ ಮುಚ್ಚಬೇಕು. ವಿದ್ಯಾರ್ಥಿಗಳು  ಮತ್ತು ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳು ಸಿಬ್ಬಂದಿ ಹೊರತುಪಡಿಸಿ ಇತರರು ನಿಷೇಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT