ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಸೇವಾ ಕೇಂದ್ರ ಆರಂಭ

ರೋಗಿಗಳ ಆರೈಕೆ ಮಾಡುವವರಿಗೆ ಉಚಿತ ವಸತಿ, ಊಟ ವ್ಯವಸ್ಥೆ
Last Updated 1 ಜೂನ್ 2021, 14:06 IST
ಅಕ್ಷರ ಗಾತ್ರ

hasa ಹಿಮ್ಸ್‌ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೈಕೆ ಮಾಡುವ ಸಂಬಂಧಿಕರು ಉಳಿದುಕೊಳ್ಳಲು ಹಾಗೂ ಊಟದ ವ್ಯವಸ್ಥೆ ಮಾಡಿರುವುದುಉತ್ತಮ ಕಾರ್ಯ ಎಂದು ಶಾಸಕ ಪ್ರೀತಂ ಜೆ.ಗೌಡ ಹೇಳಿದರು.

ನಗರದ ಹಳೆ ಪಬ್ಲಿಕ್ ಪ್ರಾಸಿಕ್ಯೂಟರ್ ಕಚೇರಿ ಕಟ್ಟಡದಲ್ಲಿ ಮಂಗಳವಾರ ರಾಷ್ಟ್ರೀಯಸ್ಪಯಂ ಸೇವಕ ಸಂಘ , ಜನಜಾಗರಣ ಟ್ರಸ್ಟ್, ಸೇವಾ ಭಾರತಿ ಸಹಯೋಗದಲ್ಲಿ ಕೋವಿಡ್ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ರೋಗಿಗಳ ಉಪಚಾರಕ್ಕಾಗಿ ದೂರ ಊರುಗಳಿಂದ ಬಂದಂತಹವರು ವಸತಿ ವ್ಯವಸ್ಥೆ ಇಲ್ಲದೆ ರಸ್ತೆ ಬದಿ, ಆಸ್ಪತ್ರೆ ಪಕ್ಕ ಮಲಗುತ್ತಿದ್ದನ್ನು ಗಮನಿಸಿ ಈ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಉಚಿತ ವಸತಿ ವ್ಯವಸ್ಥೆ ಸಹಿತ ಮೂರು ಹೊತ್ತು ಊಟ, ಎರಡು ಬಾರಿ ಕಷಾಯ, ಸ್ನಾನ, ಶೌಚಗೃಹ ವ್ಯವಸ್ಥೆ, ಕುಡಿಯಲು ಬಿಸಿನೀರು ವ್ಯವಸ್ಥೆ ಮಾಡಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ಹಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಸಂಬಂಧಿಕರ ಸಂಕಷ್ಟ ಅರಿತು ಸುಮಾರು 45 ಬೆಡ್ ಹಾಗೂ ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿರುವುದು ಮೆಚ್ಚುಗೆಯ ಕಾರ್ಯ ಎಂದರು.

ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಳಿಮುಖವಾಗುತ್ತಿದೆ. ಪಾಸಿಟಿವಿಟಿ ದರ ಸಂಪೂರ್ಣತಗ್ಗುವ ವರೆಗೂ ನಿರ್ಲಕ್ಷ್ಯ ತೋರದೆ ಕಡ್ಡಾಯವಾಗಿ ಮಾಸ್ಕ್ ಹಾಗೂ ಅಂತರಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಕೊರೊನಾ ಸೋಂಕು ತಡೆಗಟ್ಟಲು ಜನಪ್ರತಿನಿಧಿಗಳ ಸಹಕಾರದೊಂದಿಗೆ ಸೋಂಕಿತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಿ,ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.

ಪೊಲೀಸ್ ವರಿಷ್ಠಾಧಿಕಾರಿ ಆರ್‌. ಶ್ರೀನಿವಾಸಗೌಡ, ಆರ್‌ಎಸ್ಎಸ್‌ ವಿಭಾಗ ಕಾರ್ಯವಾಹ ವಿಜಯ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಕೃಷ್ಣಮೂರ್ತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT