ಹಾಸನ: ಟೈಮ್ಸ್ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಮಹಿಳೆಯರ ರಾಜ್ಯಮಟ್ಟದ ಲೆದರ್ ಬಾಲ್ ಕ್ರಿಕೆಟ್ ಟೂರ್ನಿ - ಟೈಮ್ಸ್ ಕಪ್ (ಸೀಸನ್-2) ಅನ್ನು ಜ.22ರಿಂದ 27ರವರೆಗೆ ಆಯೋಜಿಸಲಾಗಿದೆ ಎಂದು ಕೆಎಸ್ಐ ಸದಸ್ಯ ಸುರೇಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಿಳಾ ಕ್ರೀಡಾಪಟುಗಳಲ್ಲಿ ಕ್ರಿಕೆಟ್ ಬಗ್ಗೆ ಹೆಚ್ಚಿನ ಆಸಕ್ತಿ, ಆತ್ಮವಿಶ್ವಾಸ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಟೂರ್ನಿ ಆಯೋಜಿಸಲಾಗಿದೆ. ನಗರದ ಸರ್ಕಾರಿ ಸೈನ್ಸ್ ಕಾಲೇಜು ಮೈದಾನಗಳಲ್ಲಿ ಪಂದ್ಯಗಳು ನಡೆಯಲಿವೆ ಎಂದರು .

ಇಂತಹ ಟೂರ್ನಿಗಳಿಂದ ಗ್ರಾಮೀಣ ಹಾಗೂ ನಗರ ಪ್ರದೇಶದ ಮಹಿಳೆಯರಲ್ಲಿ ಕ್ರಿಕೆಟ್ ಮೇಲಿನ ಆಸಕ್ತಿ ಹೆಚ್ಚಾಗುತ್ತದೆ. ಕ್ರೀಡೆಯನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳಲು ಪ್ರೇರಣೆ ಸಿಗುತ್ತದೆ. ಮಹಿಳೆಯರು ಶಿಕ್ಷಣಕ್ಕೆ ಸೀಮಿತವಾಗದೇ ಕ್ರೀಡಾ ಕ್ಷೇತ್ರದಲ್ಲೂ ಸಾಧನೆ ಮಾಡಬೇಕೆಂಬುದೇ ನಮ್ಮ ಉದ್ದೇಶ ಎಂದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ 8 ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ. ಮಹಿಳಾ ಕ್ರಿಕೆಟ್ಗೆ ಹೆಚ್ಚಿನ ಪ್ರೋತ್ಸಾಹ, ಸಮಾನ ಅವಕಾಶ ಹಾಗೂ ಅಸ್ಮಿತೆಯ ಅಗತ್ಯವಿದೆ. ಅಕಾಡೆಮಿಯಿಂದ ಟೈಮ್ಸ್ ಕಪ್ ಮೂಲಕ ಇದು ಮಹತ್ವದ ಹೆಜ್ಜೆಯಾಗಲಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದ ಕ್ರೀಡಾಪಟುಗಳು ಹೊರಬರಲು ಸಹಕಾರಿಯಾಗುತ್ತದೆ ಎಂದರು.

ಅರ್ಜುನ್, ವಿನಯ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.