ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲು ಎಳೆಯುವುದು ಬಿಡಿ: ಹಾಸನ ಬಿಜೆಪಿ ಕಾರ್ಯಕರ್ತರಿಗೆ ಸೋಮಣ್ಣ ಕಿವಿಮಾತು

Last Updated 11 ಸೆಪ್ಟೆಂಬರ್ 2020, 14:56 IST
ಅಕ್ಷರ ಗಾತ್ರ

ಹಾಸನ: ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಸಮೀಪಿಸುತ್ತಿದ್ದು, ಇದನ್ನು ಗಮನದಲ್ಲಿರಿಸಿಕೊಂಡು ಕೆಲಸ ಮಾಡಬೇಕು ಎಂದು ವಸತಿ ಸಚಿವ ವಿ.ಸೋಮಣ್ಣ ಕಾರ್ಯಕರ್ತರಿಗೆ ಕರೆ ನೀಡಿದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯರ್ತರ ಸಭೆಯಲ್ಲಿ ಮಾತನಾಡಿದ ಅವರು ರಾಷ್ಟ್ರ
ರಾಜಕಾರಣದಲ್ಲಿ ಹಾಸನ ಜಿಲ್ಲೆ ಹೆಸರು ಪಡೆದಿದೆ. ಕಾಲು ಎಳೆಯುವುದನ್ನು ಬಿಟ್ಟು, ಪಕ್ಷ ಬಲಪಡಿಸಬೇಕು. ರಾಜ್ಯ ಬಿಜೆಪಿ ಸರ್ಕಾರ ನಿಂತ ನೀರಾಗದೆ ಉತ್ತಮವಾಗಿ ಕಾರ್ಯನಿರ್ವ ಹಿಸುತ್ತಿದೆ. ವಸತಿ ಇಲಾಖೆಯಡಿ 5.40 ಲಕ್ಷ ಮನೆಗಳ ನಿರ್ಮಾಣಕ್ಕೆ ಕ್ರಮವಹಿಸಲಾಗಿದೆ. ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ವಸತಿ ಇಲಾಖೆ ಸೇರಿದಂತೆ ಇತರೆ ಇಲಾಖೆಯ ಕೆಲಸ ಸರಿಯಾಗಿ ನಿರ್ವಹಣೆ ಆಗಿರಲಿಲ್ಲಾ ಎಂದು ಬೇಸರ ವ್ಯಕ್ತಪಡಿಸಿದರು.

ಬಡವರಿಗೆ ವಸತಿ ಹಂಚಿಕೆ ವಿಷಯದಲ್ಲಿ ಯಾವುದೇ ರಾಜಕೀಯ ಮಾಡದೆ ಎಲ್ಲಾ ಕ್ಷೇತ್ರಗಳಿಗೂ ಸಮನಾಗಿ
ಹಂಚಿಕೆ ಮಾಡಲಾಗುವುದು. ಒಂದೂವರೆ ವರ್ಷದಲ್ಲಿ 5.40 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಿ, ಮತ್ತೆ ಐದು ಲಕ್ಷ ಮನೆಗಳನ್ನು ಒಂದು ವರ್ಷದಲ್ಲಿ ನಿರ್ಮಿಸಲಾಗುವುದು ಎಂದರು.

ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ಸೂರು ಒದಗಿಸಲಾಗುವುದು. ಮಳೆಯಿಂದ ಕೊಡಗಿನಲ್ಲಿ ಅತಿ ಹೆಚ್ಚು ನಷ್ಟವಾಗಿದೆ.
ಸುಮಾರು 25 ಕಡೆ ಭೂಕುಸಿತವಾಗಿದೆ. ಪ್ರಕೃತಿ ವಿರುದ್ಧವಾಗಿ ನಡೆದು ಕೊಂಡರೆ ಏನಾಗುತ್ತದೆ ಎಂಬುದಕ್ಕೆ ಕೊಡಗಿನ ಘಟನೆ ಸೂಕ್ತ ನಿದರ್ಶನ ಎಂದು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಪ್ರೀತಂ ಗೌಡ, ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಕೆ.ಸುರೇಶ್‌, ಮುಖಂಡರಾದ ವಿಶ್ವನಾಥ್‌,
ಗುರುದೇವ್‌,ನವಿಲೆ ಅಣ್ಣಪ್ಪ, ಹುಡಾ ಅಧ್ಯಕ್ಷ ಲಲಟಾ ಮೂರ್ತಿ, ವಿಜಯ ವಿಕ್ರಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT