ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆದ್ದಾರಿ ಕಾಮಗಾರಿಯಿಂದ ಕಿರಿದಾದ ರಸ್ತೆ; ವಿದ್ಯಾರ್ಥಿಗಳ ಗೋಳು ಕೇಳುವವರೇ ಇಲ್ಲ...

ವಾಹನ ದಟ್ಟಣೆ
Last Updated 21 ಫೆಬ್ರುವರಿ 2022, 4:49 IST
ಅಕ್ಷರ ಗಾತ್ರ

ಹಿರೀಸಾವೆ:ಗ್ರಾಮೀಣ ಸಾರಿಗೆ ಸೇವೆ ಪೂರ್ಣ ಪ್ರಮಾಣದಲ್ಲಿ ಆರಂಭವಾಗಿದ್ದರೂ ಶಾಲಾ, ಕಾಲೇಜು ವಿದ್ಯಾರ್ಥಿಗಳು ಹೋಬಳಿ ಕೇಂದ್ರದ ಸಾರಿಗೆ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಪರದಾಡುವಂತಾಗಿದೆ.

ಹಿರೀಸಾವೆಯಿಂದ ಚನ್ನರಾಯ ಪಟ್ಟಣ, ಹಾಸನ, ಹೊಳೆನರಸೀಪುರ ಮತ್ತುಬಿ.ಜಿ.ನಗರದ ಕಾಲೇಜುಗಳಿಗೆ ವಿದ್ಯಾರ್ಥಿಗಳು ನಿತ್ಯ ಸಾರಿಗೆ ಬಸ್ಮೂಲಕ ಪ್ರಯಾಣಿಸುತ್ತಾರೆ. ಕೆಲ ಬಸ್‌ಗಳು ನಿಲ್ಲಿಸುವುದಿಲ್ಲ. ನಿಲ್ಲಿಸುವ ಬಸ್‌ಹತ್ತಲುನೂಕುನುಗ್ಗಲು ಉಂಟಾಗುತ್ತದೆ. ಈ ವೇಳೆ ಗುಂಪಿನಲ್ಲಿ ಕೆಲವರ ಪರ್ಸ್‌ಗಳ ಕಳ್ಳತನವಾಗಿದೆ. ಕೆಲವರು ಬಿದ್ದು ಗಾಯಗೊಂಡಿರುವ ಉದಾಹರಣೆಯೂ ಇದೆ.

ಕೆಲ ಬಸ್ ಚಾಲಕರು ವಿದ್ಯಾರ್ಥಿಗಳ ಗುಂಪು ಕಂಡು, ಸ್ವಲ್ಪ ದೂರದಲ್ಲಿನಿಲ್ಲಿಸುತ್ತಾರೆ. ಆಗ ವಿದ್ಯಾರ್ಥಿಗಳು ಬಸ್ ಹಿಂದೆ ಓಡಿಹೋಗಿ ಹತ್ತಬೇಕಾಗಿದೆ.

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆ ಕಿರಿದಾಗಿದೆ.ವಿದ್ಯಾರ್ಥಿಗಳು ರಸ್ತೆ ಮಧ್ಯದಲ್ಲಿ ಬಸ್‌ಗಾಗಿ ಕಾದು ನಿಲ್ಲಬೇಕಿದೆ. ಇದರಿಂದಹೆದ್ದಾರಿಯಲ್ಲಿ ನೂರಾರು ವಾಹನಗಳು ಸಂಚಾರಿಸುವುದರಿಂದ ಅಪಘಾತವಾಗುವ ಸಾಧ್ಯತೆಯೂ ಹೆಚ್ಚಾಗಿದೆ.

ಬಸ್‌ಗಳು ಪ್ರಯಾಣಿಕರನ್ನು ಹತ್ತಿಸಿ ಕೊಳ್ಳಲು ರಸ್ತೆಯಲ್ಲಿ ನಿಲ್ಲಿಸುವುದರಿಂದ, ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಗಳಿಗೂ ತೊಂದರೆಯಾಗಿದೆ. ಹಲವು ಬಾರಿ ಟ್ರಾಫಿಕ್ ಜಾಮ್‌ ಸಹ ಆಗುತ್ತಿದೆ.

ರಾಷ್ಟ್ರೀಯ ಹೆದ್ದಾರಿ ಪಕ್ಕದ ಎರಡು ಕಡೆ ಸರ್ವಿಸ್ ರಸ್ತೆ ಕಾಮಗಾರಿ ಪೂರ್ಣವಾಗಿದೆ.ಆದರೆ, ಬಸ್‌ಗಳು ಆ ಮಾರ್ಗದಲ್ಲಿ ಸಂಚರಿಸುತ್ತಿಲ್ಲ. ಗ್ರಾಮೀಣ ಸಾರಿಗೆ ಬಸ್‌ಗಳು ಸಹ ನಿಲ್ಲಲು ಸ್ಥಳವಿಲ್ಲ.

‘ವಿದ್ಯಾರ್ಥಿಗಳು ಬೆಳಿಗ್ಗೆ ಕಾಲೇಜಿಗೆ ಹೋಗಲು ತೊಂದರೆ ಆಗುತ್ತಿದೆ. ಟಿ.ಸಿ ಅನ್ನು ನಿಯೋಜನೆ ಮಾಡುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಹಲವು ಸಲ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ’ ಎನ್ನುತ್ತಾರೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT