ನುಗ್ಗೇಹಳ್ಳಿ: ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಹೆಚ್ಚು ಶ್ರಮವಹಿಸುತ್ತಿದ್ದು, ಮೊದಲ ಆದ್ಯತೆಯಾಗಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಶಾಸಕ ಸಿ.ಎನ್ ಬಾಲಕೃಷ್ಣ ಹೇಳಿದರು.

ಹೋಬಳಿಯ ಭುವನಹಳ್ಳಿ ಗ್ರಾಮದ ಮುಖ್ಯ ರಸ್ತೆಯಿಂದ ಬಡಾವಣೆಗೆ ಸಂಪರ್ಕಿಸುವ ಸುಮಾರು ₹40 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಕೊಡುತ್ತಿರುವುದರಿಂದ ರಸ್ತೆ ಶಿಕ್ಷಣ ಆರೋಗ್ಯ ನೀರಾವರಿ ಯೋಜನೆಗಳು ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳಿಗೆ ನಿರೀಕ್ಷೆಯಷ್ಟು ಅನುದಾನ ಬಿಡುಗಡೆ ಮಾಡುತ್ತಿಲ್ಲ. ಇದರಿಂದ ತಾಲ್ಲೂಕಿನ ಅಭಿವೃದ್ಧಿ ಕೆಲಸಗಳಿಗೆ ಹಿನ್ನಡೆಯಾಗಿದೆ ಎಂದರು.

ಭುವನಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರ ಒತ್ತಾಯದಂತೆ ವಿವಿಧ ಬಡಾವಣೆಗಳಿಗೆ ರಸ್ತೆ ಕಲ್ಪಿಸುವ ಸಲುವಾಗಿ ಸುಮಾರು ₹40 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ಈಗಾಗಲೇ ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ಧಿ ನುಗ್ಗೇಹಳ್ಳಿ - ಬಾಗೂರು ಮುಖ್ಯ ರಸ್ತೆಯಿಂದ ಗ್ರಾಮದವರೆಗಿನ ರಸ್ತೆ ಅಭಿವೃದ್ಧಿಗೆ ಈಗಾಗಲೇ ₹1.50 ಕೋಟಿ ಅನುದಾನ ಬಿಡುಗಡೆಯಾಗಿದೆ. ಜೊತೆಗೆ ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ದೇವಾಲಯಗಳ ಜೀರ್ಣೋದ್ಧಾರಕ್ಕೆ ಹೆಚ್ಚಿನ ಅನುದಾನ ಮತ್ತು ಹಲವು ಬಡಾವಣೆಗಳಿಗೆ ನಿರಂತರ ಸಂಪರ್ಕ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಗಮನಹರಿಸಲಾಗಿದೆ ಎಂದು ಅವರು ತಿಳಿಸಿದರು.

ಮುಖಂಡರಾಧ ವಿ.ಎನ್ ಮಂಜುನಾಥ್, ಚಂದ್ರಶೇಖರ್, ಸಿದರಟ್ಟಿ ಶಂಕರ್, ನಾಗರಾಜ್, ಸ್ವಾಮಿ, ನಟರಾಜ್, ದೇವರಾಜ್, ಗೋವಿಂದ್ ರಾಜ್, ಲೋಕೇಶ್, ಕಿಟ್ಟಿ, ಓಬಳಾಪುರ ಬಸವರಾಜ್, ಅಣ್ಣೇಗೌಡ, ಹುಲಿಕೆರೆ ಸಂಪತ್ ಕುಮಾರ್, ಉದ್ಯಮಿಗಳಾದ ಅಣತಿ ಯೋಗೇಶ್, ಮರುವನಹಳ್ಳಿ ದೇವರಾಜ್, ಗುತ್ತಿಗೆದಾರ ಬಾಗೂರು ಮನು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-36-677703768

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.