ಗುರುವಾರ , ಜೂನ್ 24, 2021
29 °C

ತಾ.ಪಂ. ಇಒ ಬಂಧನಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಕಲೇಶಪುರ: ತಾಲ್ಲೂಕಿನ ಬಾಳ್ಳುಪೇಟೆ ಸಮೀಪದ ಚಿಕ್ಕನಾಯಕನಹಳ್ಳಿ ಗ್ರಾಮದ ದಲಿತ ಯುವಕ ಜಯಕುಮಾರ್‌ ಎಂಬುವವರನ್ನು ಬೆತ್ತದಿಂದ ಹೊಡೆದಿರುವ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಆರ್‌.ಹರೀಶ್‌ ಅವರನ್ನು ಕೂಡಲೇ ಬಂಧಿಸಬೇಕು ಎಂದು ತಾಲ್ಲೂಕು ದಲಿತ ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ.

ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಈಗಾಗಲೇ  ದೂರು ದಾಖಲಾಗಿದೆ. ಆದರೆ ಪೊಲೀಸರು ಅವರನ್ನು ಬಂಧಿಸಿಲ್ಲ. ಬಂಧಿಸುವಂತೆ ಒತ್ತಾಯಿಸಿ ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸಮಿತಿ ಅಧ್ಯಕ್ಷ ಎಚ್‌.ಇ. ದೊಡ್ಡಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಲಾಠಿಯಿಂದ ಹೊಡೆದ ಬಗ್ಗೆ ಪ್ರಕರಣ ದಾಖಲಿಸಬೇಕು. ಆದರೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಮೊಕದ್ದಮೆ ದಾಖಲು ಮಾಡಿರುವ ಕ್ರಮ ಸರಿಯಲ್ಲ’ ಎಂದು ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಕೆ.ಪಿ. ಕೃಷ್ಣೇಗೌಡ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.