ಶುಕ್ರವಾರ, ಜನವರಿ 22, 2021
21 °C

ತಾ.ಪಂ. ಇಒ ವಿರುದ್ಧ ಅಧ್ಯಕ್ಷೆ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೇಲೂರು: ‘ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್ ಕಚೇರಿಯಲ್ಲಿ ಸ್ವಇಚ್ಛೆಯಂತೆ ನಡೆದುಕೊಳ್ಳುತ್ತಿದ್ದು ಅಧ್ಯಕ್ಷೆಯಾದ ನನ್ನನ್ನು ಕಡೆಗಣಿಸುತ್ತಿದ್ದಾರೆ’ ಎಂದು ತಾ.ಪಂ. ಅಧ್ಯಕ್ಷೆ ಸುಮಾ ಪರಮೇಶ್ ಆರೋಪಿಸಿದ್ದಾರೆ.

ಇಲ್ಲಿನ ತಾ.ಪಂ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಅಧ್ಯಕ್ಷೆಯಾದ ನಂತರ ತಾ.ಪಂ. ಇಒ ಅವರು, ಕೋವಿಡ್ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯ ನೀತಿ ಸಂಹಿತೆ ನೆಪದಲ್ಲಿ ಪಂಚಾಯಿತಿ ಕೆಲಸ ಕಾರ್ಯಗಳಿಗೆ ಸಂಬಂಧಿಸಿದಂತೆ ನನ್ನನ್ನು ಕಡೆಗಣಿಸಿ ಸ್ವಯಂ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ ನನ್ನನ್ನು ಆಹ್ವಾನಿಸುತ್ತಿಲ್ಲ’ ಎಂದು ಆರೋಪಿಸಿದರು.

‘ಈ ಬಗ್ಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಲಾಗುವುದು’ ಎಂದು ತಿಳಿಸಿದರು.

ಏಕೆ ಆಪಾದನೆ ಗೊತ್ತಿಲ್ಲ: ‘ಸುಮಾ ಪರಮೇಶ್ ಅವರು ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡ 15 ದಿನಕ್ಕೆ ನೀತಿ ಸಂಹಿತೆ ಜಾರಿಯಾಯಿತು. ಹೊಸ ಕಾಮಗಾರಿಗಳ ಪಟ್ಟಿ ತಯಾರಿಸಿಲ್ಲ, ಶಂಕುಸ್ಥಾಪನೆ ಮಾಡಿಲ್ಲ. ನಾನು ಬೇಲೂರಿಗೆ ಬಂದ ನಂತರದಲ್ಲಿ ಇವರು ನಾಲ್ಕನೇ ಅಧ್ಯಕ್ಷರು. ಯಾರು ಸಹ ನನ್ನ ಬಗ್ಗೆ ಆಪಾದನೆ ಮಾಡಿಲ್ಲ. ಇವರು ಏಕೆ ಆಪಾದನೆ ಮಾಡಿದ್ದಾರೆ ನನಗೆ ಗೊತ್ತಿಲ್ಲ’ ಎಂದು ತಾ.ಪಂ ಇಒ ರವಿಕುಮಾರ್‌ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.