ಹಾಸನ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಡಿಎಂಕೆ ಮುಖಂಡ, ಮಾಜಿ ಸಚಿವ ಕೆ.ಟಿ.ರಾಜೇಂದ್ರ ಬಾಲಾಜಿ ಅವರನ್ನು ನಗರದಲ್ಲಿ ಬುಧವಾರ ತಮಿಳುನಾಡಿನ ಪೊಲೀಸ್ ಇನ್‌ಸ್ಪೆಕ್ಟರ್ ಹರೀಶ್ ಬಾಬು ನೇತೃತ್ವದ ತಂಡ ಬಂಧಿಸಿದೆ.

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಸುಮಾರು 23 ಮಂದಿಯಿಂದ ₹ 3 ಕೋಟಿ ಹಣ ಪಡೆದು ವಂಚಿಸಿದ್ದಾರೆ ಎಂದು ಸಚಿವ ಹಾಗೂ ಸಹಚರರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಲ್ಲಿನಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿತ್ತು. ನಂತರ ತಲೆ ಮರೆಸಿಕೊಂಡಿದ್ದ ಆರೋಪಿಗಾಗಿ ಪೊಲೀಸರು ಬಲೆ ಬೀಸಿ, ಹಾಸನ ಪೊಲೀಸರಿಗೂ ಮಾಹಿತಿ ನೀಡಿದ್ದರು.

ಖಚಿತ ಮಾಹಿತಿ ಮೇರೆಗೆ ಬೆನ್ನಟ್ಟಿದ ಪೊಲೀಸರು, ನಗರದ ವಾರ್ತಾ ಇಲಾಖೆ ಮುಂಭಾಗ ಆರೋಪಿ ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ವಶಕ್ಕೆ ಪಡೆದು ಚೆನ್ನೈಗೆ ಕರೆದೊಯ್ದರು. ವಶಕ್ಕೆ ಪಡೆದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.