ಬಾಗೂರು (ನುಗ್ಗೇಹಳ್ಳಿ): ಕೇಂದ್ರ ಪುರಾತತ್ವ ಇಲಾಖೆಯ ಸಹಕಾರದೊಂದಿಗೆ ಸುಮಾರು 75 ಲಕ್ಷ ವೆಚ್ಚದಲ್ಲಿ ಹೋಬಳಿಯ ಅಣತಿ ಗ್ರಾಮದ ಪುರಾಣ ಪ್ರಸಿದ್ಧ ಲಕ್ಷ್ಮಿಕಾಂತ ದೇವಾಲಯ ಜೀರ್ಣೋದ್ಧಾರಗೊಂಡು ಉದ್ಘಾಟನೆಗೊಂಡಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

ದೇವಾಲಯ ಉದ್ಘಾಟನೆ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭಾರತ ದೇಶವು ಹಿಂದೂ ಧರ್ಮದ ತಳಹದಿಯ ಮೇಲೆ ನಿಂತಿದೆ. ಇಡೀ ವಿಶ್ವವೇ ದೇಶದ ಸಂಸ್ಕೃತಿ ಧರ್ಮಕ್ಕೆ ಗೌರವ ನೀಡುತ್ತಿದೆ. ದೇಶದ ಸಂಸ್ಕೃತಿ, ಧರ್ಮ ಉಳಿಸಲು ಎಲ್ಲರ ಸಹಕಾರ ಮುಖ್ಯ ಎಂದರು.

ಕೆರೆಯ ಹಿಂಭಾಗದ ಸೋಮೇಶ್ವರ ದೇವಾಲಯ ಪುನರ್ ನಿರ್ಮಾಣಕ್ಕೆ ₹10 ಲಕ್ಷ ಅನುದಾನ ನೀಡಲಿದ್ದು, ಏಪ್ರಿಲ್ ತಿಂಗಳಲ್ಲಿ ಭೂಮಿ ಪೂಜೆ ನೆರವೇರಿಸಲಾಗುವುದು. ಸಂಪರ್ಕ ಕಲ್ಪಿಸುವ ರಸ್ತೆಯನ್ನು ಕಾಂಕ್ರಿಟ್ ಹಾಗೂ ಚರಂಡಿ ವ್ಯವಸ್ಥೆಯೊಂದಿಗೆ ಅಭಿವೃದ್ಧಿಗೊಳಿಸಲಾಗುವುದು ಎಂದು ತಿಳಿಸಿದರು.

‘ಬೀಚಗೊಂಡನಹಳ್ಳಿ- ಕಾರೇಹಳ್ಳಿ ರಸ್ತೆಯ ಎರಡೂ ಬದಿಯನ್ನು 01 ಮೀಟರ್ ವಿಸ್ತರಣೆಗೊಳಿಸಲಾಗುವುದು. ಅಣತಿ ಮುಂಭಾಗದಲ್ಲಿ ಕಾರ್ಯಕ್ರಮಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಭಾಂಗಣ ನಿರ್ಮಾಣಗೊಳಿಸಲು ಯೋಜನೆ ರೂಪಿಸಲಾಗುವುದು’ ಎಂದು ಭರವಸೆ ನೀಡಿದರು.

ಸಂಸದ ಶ್ರೇಯಸ್ ಎಂ.ಪಟೇಲ್ ಅವರ ತಾಯಿ ಅನುಪಮಾ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶೇಖರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಧರ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವೆಂಕಟೇಶ್, ತಾ.ಪಂ ಮಾಜಿ ಸದಸ್ಯ ರಾಮಚಂದ್ರ, ಧರ್ಮದರ್ಶಿ ಗುಂಡೂರಾವ್, ಪ್ರಮುಖರಾದ ಉದ್ಯಮಿ ಅಣತಿ ಯೋಗೀಶ್, ಶಿವೇಗೌಡ, ಪ್ರಕಾಶ್ ಗೌಡ, ಕಾಂತರಾಜ್, ಎಂ.ಸಿ.ನಾಗೇಶ್, ಕೃಷ್ಣೇಗೌಡ, ಭೋಜಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.