ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಕ್ಕೊಮ್ಮೆ ಕುಡಿಯುವ ನೀರು ಪರೀಕ್ಷಿಸಿ: ಹಾಸನ ಜಿಲ್ಲಾಧಿಕಾರಿ

Published 23 ಮೇ 2024, 13:48 IST
Last Updated 23 ಮೇ 2024, 13:48 IST
ಅಕ್ಷರ ಗಾತ್ರ

ಹಾಸನ: ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಸರಬರಾಜಾಗುವ ಕುಡಿಯುವ ನೀರಿನಲ್ಲಿ ವಾರಕ್ಕೊಮ್ಮೆ ಪರೀಕ್ಷೆ ಮಾಡಿ, ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ತಿಳಿಸಿದರು.

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆಯ ಬಳಿಕ ಅವರು ಅಧಿಕಾರಿಗಳೊಂದಿಗೆ ಮಾತನಾಡಿದರು.

ಮೈಸೂರಿನಲ್ಲಿ ಕಲುಷಿತ ನೀರು ಕುಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಹಾಸನ ಜಿಲ್ಲೆಯ ಎಲ್ಲ ಕುಡಿಯುವ ನೀರಿನ ಘಟಕಗಳಲ್ಲಿ ನೀರಿನ ಮಾದರಿ ಪಡೆದು ಪ್ರತಿ ವಾರ ಪರೀಕ್ಷೆ ನಡೆಸಬೇಕು. ಈ ಬಗ್ಗೆ ವರದಿ ಸಲ್ಲಿಸುವಂತೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಹಾಗೂ ನಗರಾಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಎಲ್ಲ ರಾಜಕಾಲುವೆಗಳಲ್ಲಿ ಹೂಳು ತೆರವುಗೊಳಿಸಿ, ನೀರು ಸುಗಮವಾಗಿ ಹರಿಯುವಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಬರ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಹಾಸನ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆ ಬಂದಿದೆ. ವಿಪತ್ತು ನಿರ್ವಹಣಾ ನಿಧಿಯಲ್ಲಿ ಸಾಕಷ್ಟು ಅನುದಾನ ಇದೆ ಎಂದರು.

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಮಂಜೂರಾದ ಇನ್ನು 15 ಕುಟುಂಬಗಳಿಗೆ ಪರಿಹಾರ ಬಿಡುಗಡೆಯಾಗಬೇಕಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜಸುಲೋಚನಾ, ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT