ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಯ್ಸಳ ವಾಸ್ತು ಶಿಲ್ಪ ಕಂಡು ವಿಸ್ಮಿತರಾದ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌

Last Updated 17 ಜೂನ್ 2022, 10:38 IST
ಅಕ್ಷರ ಗಾತ್ರ

ಹಾಸನ: ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಶುಕ್ರವಾರ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೆಬೀಡು ದೇವಾಲಯಗಳಿಗೆ ಭೇಟಿ ನೀಡಿದರು.

ಐತಿಹಾಸಿಕ ವಿಶೇಷತೆ, ಹೊಯ್ಸಳ ವಾಸ್ತು ಶಿಲ್ಪ ಶೈಲಿ ಕಂಡು ವಿಸ್ಮಿತರಾದರು. ಗೈಡ್ ಅಸ್ಲಾಮ್ ಷರೀಫ್ ಅವರು ಬೇಲೂರು, ಹಳೇಬೀಡು ಶಿಲ್ಪ ಶೈಲಿ ಕುರಿತು ರಾಜ್ಯಪಾಲರಿಗೆ ವಿವರಿಸಿದರು. ನಂತರ ಚೆನ್ನಕೇಶವ ಹಾಗೂ ಹೊಯ್ಸಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯಗಳ ಅರ್ಚಕರು ರಾಜ್ಯಪಾಲರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಶಾಸಕ‌ಲಿಂಗೇಶ್, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಆರ್. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕಾಂತರಾಜು, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಎನ್ ನಂದಿನಿ, ಸಕಲೇಶಪುರ ಉಪ ವಿಭಾಗಾಧಿಕಾರಿ ಪ್ರತೀಕ್ ಭಾಯಲ್, ತಹಶೀಲ್ದಾರ್ ಮೋಹನ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ರವಿಕುಮಾರ್, ಚೆನ್ನಕೇಶವ ದೇವಾಲಯದ ಆಡಳಿತ ಅಧಿಕಾರಿ ವಿದ್ಯುಲ್ಲತಾ, ಚೆನ್ನಕೇಶವ ದೇವಾಲಯದ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷ ಡಾ. ನಾರಾಯಣಸ್ವಾಮಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT