ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಭ್ರಮದ ಈದ್ ಮಿಲಾದ್

Last Updated 19 ಅಕ್ಟೋಬರ್ 2021, 15:14 IST
ಅಕ್ಷರ ಗಾತ್ರ

ಹಾಸನ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮುಸ್ಲಿಮರು ಈದ್‌–ಮಿಲಾದ್ ಅನ್ನು ಸಂಭ್ರಮದಿಂದ ಸರಳವಾಗಿ ಮಂಗಳವಾರ ಆಚರಿಸಿದರು.

ನಗರದ ಮಸೀದಿಗಳನ್ನು ದೀಪಾಲಂಕಾರಗಳಿಂದ ಸಿಂಗರಿಸಲಾಗಿತ್ತು. ಮಸೀದಿಗಳಲ್ಲಿ ಎಂದಿನಂತೆ ಐದು ಬಾರಿ ಪ್ರಾರ್ಥನೆ (ನಮಾಜ್) ನೆರವೇರಿತು. ಪರಸ್ಪರ ಶುಭಾಶಯ ವಿನಿಮ ಮಾಡಿಕೊಂಡರು.ಕೋವಿಡ್ ಹಿನ್ನೆಲೆಯಲ್ಲಿ ಮೆರವಣಿಗೆಗೆ ಅವಕಾಶ ಇರಲಿಲ್ಲ.

‘ಕೊರೊನಾ ಸೋಂಕುನಿರ್ಮೂಲನೆಯಾಗಲಿ ’ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಮನೆಗೆ ಸೀಮಿತವಾಗಿ ಧಾರ್ಮಿಕ ಆಚರಣೆಗಳನ್ನು ಕೈಗೊಂಡರು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಷರೀಫ್‌ ಕಾಲೊನಿಯ ಖುಬಾ ಮಸೀದಿ ಇಮಾಮ್‌ ಹಬೀಬ್‌ ರಜ್ವಿ ಮಾತನಾಡಿ, ‘ಕೋವಿಡ್‌ ಬೇಗ ದೂರವಾಗಿ ಜನಜೀವನ ಸಹಜ ಸ್ಥಿತಿಗೆ ಮರಳಲಿ. ಜನರು ಶಾಂತಿ ಮತ್ತು ನೆಮ್ಮದಿ ಜೀವನ ನಡೆಸುವಂತಾಗಬೇಕು ಎಂದು ಪ್ರಾರ್ಥಿಸಿದ್ದೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT