ಆಲೂರು: ಮಿನಿ ವಿಧಾನಸೌಧ ಮಾದರಿಯಲ್ಲಿ ವಿನ್ಯಾಸಗೊಳಿಸಿರುವ ಪಾಳ್ಯ ಗ್ರಾಮ ಪಂಚಾಯಿತಿ ಕಟ್ಟಡವನ್ನು ವೀಕ್ಷಿಸಿ ಸಲಹೆ ಪಡೆಯಲು ರಾಜ್ಯದ ಮೂಲೆ ಮೂಲೆಯಿಂದ ವಿವಿಧ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿನಗಳು ತಂಡೋಪತಂಡವಾಗಿ ಭೇಟಿ ನೀಡುತ್ತಿದ್ದಾರೆ.

ಭಾನುವಾರ ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ತಳಕಾಲ್ ಹಾಗೂ ಬಾನಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರ ನೇತೃತ್ವದಲ್ಲಿ ಪಿಡಿಒ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ತಂಡ, ತಾಲ್ಲೂಕಿನ ಜೆಡಿಎಸ್ ಅಧ್ಯಕ್ಷ ಕೆ. ಎಸ್. ಮಂಜೇಗೌಡ ಹಾಗೂ ಪಾಳ್ಯ ಗ್ರಾಮ ಪಂಚಾಯಿತಿ ಅಧಿಕಾರಿಗಳ ಸಮ್ಮುಖದಲ್ಲಿ ಎರಡು ಅಂತಸ್ತಿನ ಗ್ರಾಮ ಪಂಚಾಯಿತಿ ಕಟ್ಟಡವನ್ನು ವೀಕ್ಷಿಸಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾಗಿದ್ದ ಕೆ.ಎಸ್.ಮಂಜೇಗೌಡರು, ವೀಕ್ಷಣೆಗೆ ಬಂದ ತಂಡಕ್ಕೆ ಮಾಹಿತಿ ನೀಡಿದರು. ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕು ತಳಕಾಲ್ ಗ್ರಾಮ ಪಂಚಾಯಿತಿ ಪಿಡಿಒ ವೀರಣ್ಣ ಚನ್ನಾವೀರಗೌಡ ಮಾತನಾಡಿ, ಪತ್ರಿಕೆ ಹಾಗೂ ಸಾಮಾಜಿಕ ಜಾಲತಾಣದ ಮೂಲಕ ಪಾಳ್ಯ ಗ್ರಾಮ ಪಂಚಾಯಿತಿ ಕಟ್ಟಡದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು, ಪ್ರತ್ಯಕ್ಷವಾಗಿ ನೋಡಲೇಬೇಕು ಎನ್ನುವ ಉದ್ದೇಶದಿಂದ ತಳಕಾಲ್ ಮತ್ತು ಬಾನಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಪ್ರಮುಖ ಮುಖಂಡರ ಜೊತೆ ಪಾಳ್ಯ ಗ್ರಾಮ ಪಂಚಾಯಿತಿ ಕಟ್ಟಡ ವೀಕ್ಷಿಸಿದೆವು ಎಂದರು.

ಈ ಸಂದರ್ಭದಲ್ಲಿ ತಳಕಾಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಾಹೀರಾಬಾನ್ ಬೇಗಂ, ಬಾನಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರಿಯಪ್ಪ ಹಳ್ಳಿಕೆರೆ, ಪಿಡಿಒ ರಮೇಶ್, ರಾಯಚೂರು ಕೃಷಿ ವಿಶ್ವ ವಿದ್ಯಾಲಯ ಸಿಂಡಿಕೇಟ್ ಸದಸ್ಯ ತಿಮ್ಮಣ್ಣ ಚೌಡಿ, ಮಾಜಿ ಸೈನಿಕ ನೀಲಕಂಠ ಸ್ವಾಮಿ ಸೇರಿದಂತೆ ಹಲವು ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

ಗ್ರಾ.ಪಂ. ಕಟ್ಟಡದ ವಿಶೇಷತೆ

ಕಟ್ಟಡದ ಕೆಳ ಅಂತಸ್ತಿನಲ್ಲಿ ಅಧ್ಯಕ್ಷರು ಉಪಾಧ್ಯಕ್ಷರು ಪಿಡಿಒ ಕಾರ್ಯದರ್ಶಿ ಲೆಕ್ಕಾಧಿಕಾರಿ ಡಾಟಾ ಎಂಟ್ರಿ ಆಪರೇಟರ್ ಮತ್ತು ಸಿಬ್ಬಂದಿಗೆ ಪ್ರತ್ಯೇಕ ಕೊಠಡಿ ನಿರ್ಮಾಣ ಮಾಡಲಾಗಿದೆ. ಎರಡನೇ ಅಂತಸ್ತಿನಲ್ಲಿ ಸಭೆ ಸಮಾರಂಭ ಮಾಡಲು ವಿಧಾನಸಭೆ ಮಾದರಿ ಸಭಾಂಗಣದಲ್ಲಿ 28 ಸದಸ್ಯರು ಕುಳಿತುಕೊಳ್ಳಲು ಹವಾ ನಿಯಂತ್ರಿತ ವ್ಯವಸ್ಥೆ ಪ್ರತಿ ಆಸನದ ಬಳಿ ಮೈಕ್ ವ್ಯವಸ್ಥೆ ಕಲ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.