ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್ ಕಸರತ್ತು

ವಿಧಾನ ಪರಿಷತ್ ಅಖಾಡ: ಅಭ್ಯರ್ಥಿಗಳಿಂದ ಭರ್ಜರಿ ಮತ ಬೇಟೆ
Last Updated 7 ಡಿಸೆಂಬರ್ 2021, 19:30 IST
ಅಕ್ಷರ ಗಾತ್ರ

ಹಾಸನ: ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ ಗೆ ನಡೆಯುವ ಚುನಾವಣೆಯಲ್ಲಿಮೂರು ಪಕ್ಷದ ಅಭ್ಯರ್ಥಿಗಳು ಭರ್ಜರಿ ಮತ ಬೇಟೆ ಆರಂಭಿಸಿದ್ದಾರೆ.

ಕಾಂಗ್ರೆಸ್ ಮಣಿಸಲು ಬಿಜೆಪಿ, ಜೆಡಿಎಸ್‌ ಕಾರ್ಯತಂತ್ರ ನಡೆಸುತ್ತಿವೆ. ಕುಟುಂಬ ರಾಜಕಾರಣಅಸ್ತ್ರವನ್ನೇ ಪ್ರಮುಖ ವಾಗಿ ಪ್ರಯೋಗ ಮಾಡುತ್ತಿ ರುವ ರಾಷ್ಟ್ರೀಯ ಪಕ್ಷಗಳು, ಇದೇ ಲಾಭ ತಂದುಕೊಡಬಹುದು ಎಂಬ ಲೆಕ್ಕಚಾರದಲ್ಲಿ ತೊಡಗಿವೆ.

ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರ ಪಡೆಯೊಂದಿಗೆ ಶಂಕರ್‌ ಮತಬೇಟೆಗೆ ಇಳಿದಿದ್ದು,ಎದುರಾಳಿಗೆ ಸೆಡ್ಡು ಹೊಡೆದಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಮಾಜಿಶಾಸಕ ಸಿ.ಎಸ್. ಪುಟ್ಟೇಗೌಡ ಹಾಗೂ ಇತರೆ ನಾಯಕರು ಅಭ್ಯರ್ಥಿ ಬೆನ್ನಿಗೆ ನಿಂತಿದ್ದಾರೆ.

ಜಿಲ್ಲಾ ಉಸ್ತುವಾರಿ ಸಂಸದ ಡಿ.ಕೆ.ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ಅವರು ಕ್ಷೇತ್ರದಲ್ಲಿ ಎರಡು ದಿನ ಪ್ರಚಾರ ಸಭೆ ನಡೆಸಿ, ಕಾರ್ಯಕರ್ತರಲ್ಲಿ ಹುರುಪು ತುಂಬಿದ್ದಾರೆ. ಕ್ಷೇತ್ರ ಉಳಿಸಿಕೊಳ್ಳಲು ಕಸರತ್ತಿನಲ್ಲಿ ತೊಡಗಿದ್ದಾರೆ.

ಮಾಜಿ ಸಚಿವ ಎ.ಮಂಜು ಅವರು ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಿರುವುದರಿಂದ ಕಾಂಗ್ರೆಸ್‌ ಲಾಭ ನಿರೀಕ್ಷಿಸುತ್ತಿದೆ. ಇದು ಬಿಜೆಪಿಗೆ ಹಿನ್ನಡೆಯಾಗಿದೆ ಎನ್ನಲಾಗಿದೆ.

2015ರಲ್ಲಿ ನಡೆದ ಚುನಾವಣೆಯಲ್ಲಿ ಆಂತರಿಕ ಕಚ್ಚಾಟದ ಕಾರಣಕ್ಕೆ ಕಡಿಮೆ ಮತಗಳಅಂತರದಿಂದ ಜೆಡಿಎಸ್‌ ಅಭ್ಯರ್ಥಿ ಪಟೇಲ್ ಶಿವರಾಂ ಸೋತರು. ಹಿಂದಿನ ಲೋಪದೋಷ ಸರಿಪಡಿಸಿಕೊಂಡು ಎಲ್ಲರ ವಿಶ್ವಾಸಮತ್ತು ಸಂಘಟನಾ ಶಕ್ತಿ ಬೆನ್ನಿಗಿಟ್ಟುಕೊಂಡು ಜೆಡಿಎಸ್‌ ಅಭ್ಯರ್ಥಿ ಆರ್.ಸೂರಜ್‌ ಪ್ರಚಾರ ಚುರುಕುಗೊಳಿಸಿದ್ದಾರೆ.

2014ರ ಲೋಕಸಭೆ ಚುನಾವಣೆ ಯಿಂದಲೂ ದೇವೇಗೌಡ, ಎಚ್.ಡಿ.ರೇವಣ್ಣ, ಕಿರಿಯಸಹೋದರ ಪ್ರಜ್ವಲ್‌ ಸ್ಪರ್ಧಿಸಿದ ಚುನಾವಣೆಗಳಲ್ಲಿ ಸಕ್ರಿಯವಾಗಿ ಸೂರಜ್ ಪ್ರಚಾರದಲ್ಲಿ ತೊಡಗಿದ್ದಾರೆ. ಖಡಕ್ನಿರ್ಧಾರಗಳ ಮೂಲಕ ಪಕ್ಷದ ಜಿಲ್ಲಾ ಘಟಕದಲ್ಲಿ ಜನಪ್ರಿಯರೂ ಆಗಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಘೋಷಣೆ ಗೂ ಮುನ್ನ ಕಾರ್ಯಕರ್ತರ ಅಭಿಪ್ರಾಯ ಕೇಳುವ ನೆಪದಲ್ಲಿಶಾಸಕ
ಎಚ್.ಡಿ ರೇವಣ್ಣ ನೇತೃತ್ವದಲ್ಲಿ ವಿಧಾನಸಭಾ ಕ್ಷೇತ್ರವಾರು ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಸದಸ್ಯರ ಸರಣಿ ಸಭೆ ನಡೆಸಿ ಒಂದು ಸುತ್ತಿನ ಪ್ರಚಾರ ಮಾಡಲಾಗಿದೆ.

ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಜೆಡಿಎಸ್ ಸಂಘಟನೆ ಬಲಯುತ ವಾಗಿದ್ದು, ಪಕ್ಷ ಬೆಂಬಲಿತಸ್ಥಳೀಯ ಸಂಸ್ಥೆಗಳ ಸದಸ್ಯರ ಸಂಖ್ಯೆ ಹೆಚ್ಚಿದೆ. ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿಆರರಲ್ಲಿ ಜೆಡಿಎಸ್ ಸದಸ್ಯರಿದ್ದು, ಅವರೆಲ್ಲರೂ ವರಿಷ್ಠರ ಕುಟುಂಬದ ಪ್ರತಿಷ್ಠೆ ರಕ್ಷಣೆಗೆ ಟೊಂಕ ಕಟ್ಟಿನಿಂತಿದ್ದಾರೆ. ಆದರೆ, ಕಾಂಗ್ರೆಸ್‌ಗೆ ಜಿಲ್ಲೆಯಲ್ಲಿ ಶಾಸಕರ ಬೆಂಬಲವೇ ಇಲ್ಲ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ತೋರಿದ್ದ ಸಮಾಧಾನಕರ ಪ್ರದರ್ಶನ ಸದ್ಯ ಸ್ಪರ್ಧೆಯನ್ನು ತೀವ್ರ ಹಣಾಹಣಿಮಟ್ಟಕ್ಕೆ ಕೊಂಡೊಯ್ಯಬಹುದು.

ಕ್ಷೇತ್ರದಲ್ಲಿ ಮೊದಲ ಬಾರಿ ಕಮಲ ಅರಳಿಸಲು ಆಡಳಿತರೂಢ ಬಿಜೆಪಿ ತನ್ನೆಲ್ಲ ಶಕ್ತಿವಿನಿಯೋಗಿಸುತ್ತಿದೆ. ಕಾಂಗ್ರೆಸ್‌ನಿಂದ ಸ್ಥಾನ ಕಸಿದುಕೊಳ್ಳಲು ಕಮಲ ಪಡೆ ‘ಕುಟುಂಬರಾಜಕಾರಣ’ ಕಾರ್ಡ್‌ ಬಳಸಿದೆ. ಅಭ್ಯರ್ಥಿ ಎಚ್.ಎಂ.ವಿಶ್ವನಾಥ್‌ ಅವರುಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಜಿಲ್ಲೆಯ ಏಕೈಕ ಬಿಜೆಪಿಶಾಸಕ ಪ್ರೀತಂ ಗೌಡ ನೇತೃತ್ವದಲ್ಲಿ ಚುನಾವಣಾ ಸಮಿತಿ ರಚಿಸಿಕೊಂಡು ರಣತಂತ್ರರೂಪಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT