ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಡಾನೆ ಸಮಸ್ಯೆ: ಪರಿಹಾರಕ್ಕಾಗಿ ಪ್ರತಿಭಟನೆ

Published 24 ಜೂನ್ 2024, 15:56 IST
Last Updated 24 ಜೂನ್ 2024, 15:56 IST
ಅಕ್ಷರ ಗಾತ್ರ

ಬೇಲೂರು: ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ತಾಲ್ಲೂಕಿನ ಚೀಕನಹಳ್ಳಿ ಹಾಗೂ ಹುನುಗನಹಳ್ಳಿ ಗ್ರಾಮಸ್ಥರು ಇಲ್ಲಿನ ಅರಣ್ಯ ಇಲಾಖೆ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಗ್ರಾಮಸ್ಥ ರಮೇಶ್ ಮಾತನಾಡಿ, ‘ಕಾಡಾನೆಗಳ ಹಿಂಡು ಪ್ರತಿನಿತ್ಯ ಬೆಳೆ ಹಾಳುಮಾಡುತ್ತಿವೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಶಾಶ್ವತ ಪರಿಹಾರ ನೀಡಿ ಇಲ್ಲದಿದ್ದರೆ ನಮ್ಮನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಿ, ಕೆಲಸಕ್ಕೆ ಕಾರ್ಮಿಕರು ಬಾರದೆ ತೊಂದರೆಯಾಗುತ್ತಿದೆ’ ಎಂದರು.

ವಲಯ ಅರಣ್ಯಾಧಿಕಾರಿ ವಿನಯ್ ಮಾತನಾಡಿ, ‘ಮಲಸಾವರ ಹಾಗೂ ಚೀಕನಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳು ಬೀಡುಬಿಟ್ಟಿವೆ, ಇದರ ಬಗ್ಗೆ ನಾವು ಜನರಿಗೆ ಜಾಗೃತಿ ಮೂಡಿಸುವುದರ ಜೊತೆಗೆ ನಮ್ಮ ಮೇಲಾಧಿಕಾರಿಗಳಿಗೆ ತಿಳಿಸುತ್ತಿದ್ದೇವೆ’ ಎಂದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಪ್ರದೀಪ್, ಕಿರಣ, ಸಂತೋಷ್, ಮಂಜುನಾಥ್, ಚಕ್ರವರ್ತಿ, ಎಲೆನ್, ಪ್ರಸನ್ನ, ರಾಧ, ಪೂರ್ಣೇಶ್, ಮದನ್, ರಂಜಿತ್, ಅಜಿತ್ ಕುಮಾರ್ ‌ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT