ಮಂಗಳವಾರ, ಜನವರಿ 26, 2021
15 °C

ಸುವರ್ಣ ದೀಕ್ಷಾ ಮಹೋತ್ಸವ ಸರಳ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರವಣಬೆಳಗೊಳ: ಕ್ಷೇತ್ರದ ಪೀಠಾಧಿಪತಿ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರ 52ನೇ ಸುವರ್ಣ ದೀಕ್ಷಾ ಮಹೋತ್ಸವ ಶನಿವಾರ ಸರಳವಾಗಿ ಆಚರಿಸಲಾಯಿತು.

ಪಟ್ಟಣದ ಜೈನಮಠದ ಬಸದಿಯಲ್ಲಿರುವ ದೀಕ್ಷಾ ಗುರುಗಳಾದ ಭಟ್ಟಾಕಲಂಕ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಭಾವಚಿತ್ರಕ್ಕೆ ಹಾಗೂ ಗುರು ಪೀಠಕ್ಕೆ ಚಾರುಕೀರ್ತಿ ಶ್ರೀಗಳು ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಸಮರ್ಪಿಸಿದರು. ನಂತರ ಕ್ಷೇತ್ರದ ಅಧಿ ದೇವತೆ ಕೂಷ್ಮಾಂಡಿನಿ ಅಮ್ಮನವರಿಗೆ ಮಹಾ ಮಂಗಳಾರತಿ ನೆರವೇರಿಸಲಾಯಿತು.

ಪೂಜಾ ಕಾರ್ಯಕ್ರಮದ ನೇತೃತ್ವವನ್ನು ಕ್ಷೇತ್ರದ ಪ್ರತಿಷ್ಠಾಚಾರ್ಯರಾದ ಎಸ್‌.ಡಿ.ನಂದಕುಮಾರ್‌ ಮತ್ತು ಬಸ್ತಿ ವಹಿಸಿದ್ದರು.

ಶ್ರವಣಬೆಳಗೊಳ ದಿಗಂಬರ ಜೈನ ಸಮಾಜದ ಕಾರ್ಯದರ್ಶಿ ಎಸ್.ಪಿ.ಭಾನುಕುಮಾರ್, ಎಸ್.ಡಿ.ಜೆ.ಎಂ.ಐ.ಎಂ.ಸಿ. ಟ್ರಸ್ಟ್ ಸದಸ್ಯ ಜಿ.ಬಿ. ದೇವೇಂದ್ರಕುಮಾರ್ ಹಾಗೂ ಮಠದ ಆಡಳಿತ ಮಂಡಳಿ ಸಿಬ್ಬಂದಿ ವರ್ಗದವರು ಶ್ರೀಗಳ ಆಶೀರ್ವಾದ ಪಡೆದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.