ಹಾಸನ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಜೂನ್. 8 ಮತ್ತು 9 ರಂದು ಜಿಲ್ಲಾ ಪ್ರವಾಸ ಮಾಡಲಿದ್ದಾರೆ.

ಜೂನ್ 8 ರಂದು ಬೆಳಿಗ್ಗೆ 9.15ಕ್ಕೆ ಕಿರಿಸಾವೆಯ ಹೆಬ್ಬಾಗಿಲು ಆಂಜನೇಯ ದೇವಸ್ಥಾನ ಹಾಗೂ ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕೋನಹಳ್ಳಿ ಗೇಟ್ ಶಿರಡಿ ಮಂದಿರಕ್ಕೆ ಭೇಟಿ ನೀಡುವರು. ಬೆಳಿಗ್ಗೆ 10 ಗಂಟೆಗೆ ಹಾಸನ ನಗರದ ಸಿದ್ದೇಶ್ವರ ಸ್ವಾಮಿ ದೇವಸ್ಥಾನ ಹಾಗೂ 10.15ಕ್ಕೆ ಆದಿಚುಂಚನಗಿರಿ ಹಾಸನ ಶಾಖಾ ಮಠಕ್ಕೆ ಭೇಟಿ ನೀಡಿದ ನಂತರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

ಮಧ್ಯಾಹ್ನ 12.30 ಕ್ಕೆ ಸಂಸದ, ಶಾಸಕರು, ಜಿಲ್ಲಾ ಪಂಚಾಯಿತಿ ಮತ್ತು ನಗರಸಭೆ ಪ್ರತಿನಿಧಿಗಳ ಜೊತೆ ಔಪಚಾರಿಕ ಭೇಟಿ ನೀಡಿ ಕೊರೊನಾ ನಿಯಂತ್ರಣ ನಿಯಮಗಳ ಅನುಷ್ಠಾನ ಮತ್ತು ಜಿಲ್ಲೆಯ ಪೂರಕ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸುವರು.

ಮಧ್ಯಾಹ್ನ 2 ಗಂಟೆಗೆ ಪತ್ರಿಕಾ ಗೋಷ್ಠಿ ನಡೆಸಿ, ನಂತರ 3 ಗಂಟೆಗೆ ಜಿಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಹಾಗೂ ಐಸೋಲೇಷನ್ ವಾರ್ಡ್ಗಳಿಗೆ ಮತ್ತು ಕ್ವಾರೆಂಟೈನ್ ಹಾಗೂ ಕಂಟೈನ್ಮೆಂಟ್ ಝೋನ್ ಗಳಿಗೆ ಭೇಟಿ ನೀಡಿ ಕೊರೊನಾ ಸೋಂಕಿತರ ಚಿಕಿತ್ಸೆ ಕುರಿತಂತೆ ಪರಿಶೀಲನಾ ಸಭೆ ನಡೆಸುವರು.

ಸಂಜೆ 4.45 ಕ್ಕೆ ಅರಕಲಗೂಡು ತಾಲ್ಲೂಕಿನಲ್ಲಿ ಕೊರೊನಾ ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ಐಸೋಲೇಷನ್ ವಾರ್ಡ್ಗಳಿಗೆ ಮತ್ತು ಕ್ವಾರೈಂಟೈನ್ ಹಾಗೂ ಕಂಟೈನ್ಮೆಂಟ್ ಝೋನ್ಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವ ಸಚಿವರು ಅಂದು ಸಂಜೆ 7.30ಕ್ಕೆ ಹಾಸನಕ್ಕೆ ಆಗಮಿಸಿ ವ್ಯಾಸ್ತವ್ಯ ಮಾಡುವರು.

ಜೂನ್ 9 ರಂದು ಬೆಳಿಗ್ಗೆ 9.30ಕ್ಕೆ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಕೊರೊನಾ ತುರ್ತು ಪರಿಸ್ಥಿತಿ ಹಿನ್ನೆಲೆ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ಐಸೋಲೇಷನ್ ವಾರ್ಡ್ಗಳಿಗೆ ಮತ್ತು ಕ್ವಾರೈಂಟೈನ್ ಹಾಗೂ ಕಂಟೈನ್ಮೆಂಟ್ ಝೋನ್ಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಬೆಂಗಳೂರಿಗೆ ತೆರಳುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.