ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಣನೂರು: ಐಸೋಲೇಷನ್ ವಾರ್ಡ್‌ ಉದ್ಘಾಟಿಸಿದ ಶಾಸಕ ಎ.ಮಂಜು

Published : 4 ಸೆಪ್ಟೆಂಬರ್ 2024, 12:13 IST
Last Updated : 4 ಸೆಪ್ಟೆಂಬರ್ 2024, 12:13 IST
ಫಾಲೋ ಮಾಡಿ
Comments

ಕೊಣನೂರು: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದದಲ್ಲಿ ₹18 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ 6 ಹಾಸಿಗೆಗಳ ಸಾಮರ್ಥ್ಯದ ಐಸೋಲೇಷನ್ ವಾರ್ಡ್‌ ಅನ್ನು ಶಾಸಕ ಎ.ಮಂಜು ಉದ್ಘಾಟಿಸಿದರು.

‘ತಾಲ್ಲೂಕಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಉತ್ತಮ ಸೇವೆಗಳು ದೊರಕುತ್ತಿದ್ದು, ಜನರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಲು ಶ್ರಮಿಸುತ್ತೇನೆ’ ಎಂದು ಭರವಸೆ ನೀಡಿದರು.

ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುನಿಲ್, ವೈದ್ಯಾಧಿಕಾರಿ ಡಾ. ಸುದರ್ಶನ್, ಆರೋಗ್ಯ ರಕ್ಷಾ ಸಮಿತಿ ಉಪಾಧ್ಯಕ್ಷ ಕೆ.ವಿ. ಶ್ರೀನಿವಾಸಮೂರ್ತಿ, ಗ್ರಾ.ಪಂ. ಅಧ್ಯಕ್ಷೆ ಮಿಸ್ಬಾ ರಿಜ್ವಾನ್, ಸದಸ್ಯ ಶಿವಣ್ಣ, ವೆಂಕಟೇಶ್, ಸರಗೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶಶಿಧರ್, ನೀರು ಬಳಕೆದಾರರರ ಸಂಘದ ಅಧ್ಯಕ್ಷ ಮೊಕ್ತಾರ್ ಪಾಷಾ, ಹಂಡ್ರಂಗಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎಸ್. ದಿಲೀಪ್ ಕುಮಾರ್, ಆರೋಗ್ಯ ನಿರೀಕ್ಷಕ ಎಂ.ಆರ್. ಆನಂದಗೌಡ ಮತ್ತಿತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT