ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ ರಹಿತ ಸಮಾಜ ನಿರ್ಮಾಣ ಅಗತ್ಯ

ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಶಾಸಕ ಎಚ್.ಕೆ.ಕುಮಾರಸ್ವಾಮಿ
Last Updated 6 ಡಿಸೆಂಬರ್ 2021, 16:39 IST
ಅಕ್ಷರ ಗಾತ್ರ

ಹಾಸನ: ಸಮಾನತೆ, ಜಾತಿ ರಹಿತ ಸಮಾಜದ ನಿರ್ಮಾಣವಾಗಿ ಸಾಮಾಜಿಕ ನ್ಯಾಯ ಎಲ್ಲರಿಗೂ ಒದಗಬೇಕು. ಆಗ ಮಾತ್ರ ಸಮಾನ ಭಾರತ ಕಟ್ಟಲು ಸಾಧ್ಯ ಎಂದು ಶಾಸಕಎಚ್.ಕೆ. ಕುಮಾರಸ್ವಾಮಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿಮಾತನಾಡಿದ ಅವರು, ಶೋಷಿತರಿಗೆ ನ್ಯಾಯ ದೊರಕಬೇಕಾದರೆ ಆರ್ಥಿಕವಾಗಿ ಅನೇಕ ಅಭಿವೃದ್ಧಿಕಾರ್ಯಗಳನ್ನು ಹಮ್ಮಿಕೊಳ್ಳುವುದರ ಜೊತೆಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕುಎಂದು ನುಡಿದರು.

ಶಾಸಕ ಪ್ರೀತಮ್ ಜೆ. ಗೌಡ ಮಾತನಾಡಿ, ಶೋಷಿತರನ್ನು ಮೇಲೆ ತರಲು ಸಂವಿಧಾನದಲ್ಲಿರೂಪಿಸಿರುವ ಕಾರ್ಯಕ್ರಮಗಳನ್ನು ಚುನಾಯಿತ ಪ್ರತಿನಿಧಿಗಳು ಪ್ರಾಮಾಣಿಕವಾಗಿ ಪಾಲಿಸಿಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಕಾಯಕಲ್ಪ ಮಾಡಬೇಕು ಎಂದರು.

ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ದೇಶದ ಸಂವಿಧಾನವೇ ನಮ್ಮ ಧರ್ಮ ಗ್ರಂಥಎಂಬುದನ್ನು ಗಮನದಲ್ಲಿರಿಸಿಕೊಂಡು ಸಾಮರಸ್ಯ ಸಮಾಜ ನಿರ್ಮಿಸಲು ಸಾಧ್ಯ ಎಂದುಹೇಳಿದರು.

ಶಿಡ್ಲುಘಟ್ಟ ಮಠದ ಪೀಠಾಧ್ಯಕ್ಷ ಸಂಜಯ್ ಕುಮಾರ್ ಸ್ವಾಮೀಜಿ ಮಾತನಾಡಿ, ಭಾರತೀಯರ ಜೀವನಾಡಿಯಲ್ಲಿ ಸ್ವಾತಂತ್ರ್ಯ, ಸಮಾನತೆ ಪ್ರತಿಪಾದಿಸಿದ ಮಾನವತವಾದಿಯಾಗಿದ್ದಾರೆ ಎಂದುಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಾಗರಾಜ್, ಉಪ ಕಾರ್ಯದರ್ಶಿ ಪುನೀತ್,ತಹಶೀಲ್ದಾರ್ ನಟೇಶ್, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ ಶಿವಣ್ಣ, ಸಣ್ಣ ಕೈಗಾರಿಕೆಗಳ ಸಂಘಅಧ್ಯಕ್ಷ ಮಹಾಂತಪ್ಪ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಯಅಧಿಕಾರಿ, ಸಿಬ್ಬಂದಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT