ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಸಕ್ರಿಯ ಪ್ರಕರಣಗಳ ಸಂಖ್ಯೆ 896ಕ್ಕೆ ಏರಿಕೆ

Last Updated 9 ಏಪ್ರಿಲ್ 2021, 16:03 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಹೊಸದಾಗಿ 131 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ
ಸಂಖ್ಯೆ 30,315 ಏರಿಕೆಯಾಗಿದೆ.

896 ಸಕ್ರಿಯ ಪ್ರಕರಣಗಳ ಪೈಕಿ 7 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಬಿಡುಗಡೆಯಾದ 55 ಮಂದಿ ಸೇರಿ ಈವರೆಗೆ 28,941 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕಾಯಿಲೆಯಿಂದ ಇಲ್ಲಿಯವರೆಗೆ ಒಟ್ಟು 478 ಮಂದಿ ಮೃತಪಟ್ಟಿದ್ದಾರೆ.

ಹೊಸದಾಗಿ ಹಾಸನ ತಾಲ್ಲೂಕಿನ 65 ಮಂದಿ, ಅರಸೀಕೆರೆ 20, ಚನ್ನರಾಯಪಟ್ಟಣ 11, ಬೇಲೂರು 9, ಹೊಳೆನರಸೀಪುರ 7, ಆಲೂರು 3, ಸಕಲೇಶಪುರ 12 ಹಾಗೂ ಅರಕಲಗೂಡು 4 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ನಗರದ ಮಲೆನಾಡು ತಾಂತ್ರಿಕ ಕಾಲೇಜು ವಸತಿ ನಿಲಯದ ಬಾಣಸಿಗ ಸೇರಿದ ಎಂಟು ವಿದ್ಯಾರ್ಥಿಗಳಿಗೆ
ಕೊರೊನಾ ಸೋಂಕು ತಗುಲಿದೆ. ಹಾಗಾಗಿ ಕಾಲೇಜಿಗೆ 22 ದಿನ ರಜೆ ಘೋಷಿಸಲಾಗಿದೆ. ಸೋಂಕಿತ
ವಿದ್ಯಾರ್ಥಿಗಳು ಆಯುಷ್‌ ಆಸ್ಪತ್ರೆಯ ಕೋವಿಡ್‌ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಳು ದಿನಗಳ ಬಳಿಕ
ನೆಗೆಟಿವ್‌ ವರದಿ ಬಂದರೆ ಮಾತ್ರ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿ ಕೊಡಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT