ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಸಂಚಲನ ಮೂಡಿಸಿದ ‘ಪೆನ್ ಡ್ರೈವ್’

Published 23 ಏಪ್ರಿಲ್ 2024, 15:40 IST
Last Updated 23 ಏಪ್ರಿಲ್ 2024, 15:40 IST
ಅಕ್ಷರ ಗಾತ್ರ

ಹಾಸನ: ಲೋಕಸಭೆ ಚುನಾವಣೆಗೆ ಇನ್ನೆರಡು ದಿನ ಉಳಿದಿರುವಂತೆ, ಜಿಲ್ಲೆಯ ರಾಜಕೀಯ ಯುವ ನಾಯಕರೊಬ್ಬರ ಖಾಸಗಿ ಚಟುವಟಿಕೆಗಳ ಮಾಹಿತಿಯುಳ್ಳ ಪೆನ್ ಡ್ರೈವ್‌ಗಳು ಪಾರ್ಕ್, ಕ್ರೀಡಾಂಗಣ ಹಾಗೂ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ದೊರೆಯುತ್ತಿವೆ ಎಂಬ ವದಂತಿ ಹರಡಿದ್ದು, ಸಂಚಲನ ಮೂಡಿಸಿದೆ.

ಯುವ ನಾಯಕರೊಬ್ಬರ ಖಾಸಗಿ ಚಟುವಟಿಕೆಗಳಿರುವ ವಿಡಿಯೋಗಳನ್ನು ಪೆನ್ ಡ್ರೈವ್‌ಗಳಲ್ಲಿ ತುಂಬಿ ಅನಾಮಧೇಯವಾಗಿ ಹರಡಲಾಗುತ್ತಿದೆ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ನಡೆದಿದೆ.

ಕೆಲ ತಿಂಗಳ ಹಿಂದೆ ಯುವ ನಾಯಕರು ನ್ಯಾಯಾಲಯದ ಮೊರೆ ಹೋಗಿ, ತಮಗೆ ಸಂಬಂಧಿಸಿದ ಯಾವುದೇ ವಿಡಿಯೋಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡಬಾರದೆಂದು ತಡೆಯಾಜ್ಞೆ ತಂದಿದ್ದರು‌ ಎನ್ನಲಾಗಿದೆ.

ಇದೀಗ, ಎರಡು ದಿನದಿಂದ ವಿಡಿಯೋಗಳು ಪೆನ್‌ಡ್ರೈವ್‌ಗಳ ಮೂಲಕ ಹರಿದಾಡುತ್ತಿವೆ ಎನ್ನಲಾಗಿದ್ದು, ಅವರ ಕುಟುಂಬದಲ್ಲಿ ಆತಂಕ ಮನೆ ಮಾಡಿದೆ. ಇದು ಚುನಾವಣೆಯ ಮೇಲೂ ಪರಿಣಾಮ ಬೀರಬಹುದು ಎಂದೂ ಹೇಳಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT