ಭಾನುವಾರ, ಆಗಸ್ಟ್ 14, 2022
20 °C
ಹೇಮಾವತಿ ಜಲಾಶಯ ಯೋಜನೆ

ದಾಖಲೆ ನಾಶ ಮಾಡುವ ಸಾಧ್ಯತೆ, ಕಡತ ವಶಕ್ಕೆ ಪಡೆಯಲು ರೇವಣ್ಣ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ‘ಹೇಮಾವತಿ ಜಲಾಶಯ ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ಅಕ್ರಮ ಭೂಮಿ ಕಬಳಿಸಿರುವ ಹಗರಣದ ತನಿಖೆ ನಡೆಯುತ್ತಿರುವಾಗಲೇ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಮಂಜುನಾಥ್ ಅವರು ದಾಖಲೆಗಳನ್ನು ತಿದ್ದುವ ಅಥವಾ ನಾಶ ಮಾಡುವ ಸಾಧ್ಯತೆ ಇದೆ’ ಎಂದು ಶಾಸಕ ಎಚ್.ಡಿ.ರೇವಣ್ಣ ಆರೋಪಿಸಿದರು.

‘ಮಂಜುನಾಥ್‌ ಅವರು ಈ ಹಿಂದೆ ಹಾಸನ ತಾಲ್ಲೂಕು ತಹಶೀಲ್ದಾರರಾಗಿದ್ದ ವೇಳೆ ಹಲವು ದಾಖಲಾತಿಗಳನ್ನು ತಿದ್ದಿರುವ ಆರೋಪಗಳಿವೆ. ಹಾಗಾಗಿ ಹೇಮಾವತಿ ಜಲಾಶಯ ಯೋಜನೆ ಭೂ ಸ್ವಾಧೀನಾಧಿಕಾರಿಯ ಎರಡು ಕಚೇರಿಗಳ ಎಲ್ಲ ಕಡತಗಳನ್ನೂ ಜಿಲ್ಲಾಧಿಕಾರಿ ವಶಕ್ಕೆ ತೆಗೆದುಕೊಳ್ಳಬೇಕು’ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು

ಬಡ್ತಿ ನೀಡಿ ಸಕಲೇಶಪುರ ತಹಶೀಲ್ದಾರ್ ಹುದ್ದೆಯಿಂದ ವಿಶೇಷ ಭೂ ಸ್ವಾಧೀನಾಧಿಕಾರಿ ಹುದ್ದೆಗೆ ವರ್ಗ ಮಾಡಿರುವುದರ ಹಿಂದೆ ದೊಡ್ಡ ಹುನ್ನಾರವೇ ಇದೆ. ಈಗಾಗಲೇ ಅಕ್ರಮ ಭೂ ಮಂಜೂರಾತಿ ಕುರಿತು ತನಿಖೆ ನಡೆಯುತ್ತಿದೆ. ಈ ವಿಷಯವನ್ನು ಜಿಲ್ಲಾಧಿಕಾರಿ ಅವರ ಗಮನಕ್ಕೂ ತರಲಾಗಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೂ ಪತ್ರ ಬರೆಯಲಾಗುವುದು. ಅಗತ್ಯವಿದ್ದರೆ ಲೋಕಾಯುಕ್ತಕ್ಕೂ ದೂರು ನೀಡುತ್ತೇನೆ ಎಂದರು.

ಮುಂದಿನ ವಾರ ನಡೆಯುವ ವಿಧಾನಸಭಾ ಅಧಿವೇಶನದಲ್ಲಿಯೂ ಈ ಬಗ್ಗೆ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯಲಾಗುವುದು. ಹಾಸನ ಜಿಲ್ಲೆಯಲ್ಲಿ 10 ವರ್ಷಗಳಿಗೂ ಹೆಚ್ಚು ಸಮಯ ಕೆಲಸ ಮಾಡಿದ್ದ ಭಷ್ಟ ಅಧಿಕಾರಿಗಳನ್ನೇ ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಗೆ ವರ್ಗ ಮಾಡಿ, ರಕ್ಷಣೆ ಮಾಡಿಕೊಂಡು ಬರಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

‘ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು’ ಎಂದಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರಿಗೆ ರೈತರ ಕಷ್ಟ ಗೊತ್ತಿಲ್ಲ. ಅಧಿಕಾರದ ಮದದಲ್ಲಿ ದುರಂಹಾಕರದ ಮಾತುಗಳನ್ನಾಡಿದ್ದಾರೆ. ಕೃಷಿ ಮಂತ್ರಿಯಾಗಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕಾದವರೇ ರೈತರ ಬಗ್ಗೆ ಅವಹೇಳ ಮಾಡುವುದು ಸಲ್ಲದು. ರೈತರ ಬಗ್ಗೆ ಕಾಳಜಿ ಇದ್ದರೆ ಕ್ಷಮೆ ಕೇಳಲಿ ಎಂದರು.

ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ ಕೂಡಲೆ ಕೇಂದ್ರ ಸರ್ಕಾರವು ರೈತರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು