ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಜೆಡಿಎಸ್‌ ಶಕ್ತಿ ಏನೆಂಬುದು ಗೊತ್ತಾಗಿದೆ -ಶಾಸಕ ಎಚ್.ಡಿ. ರೇವಣ್ಣ

'ಯಾವ ಅಭ್ಯರ್ಥಿಯನ್ನು ಟೀಕಿಸುವುದಿಲ್ಲ'
Last Updated 25 ನವೆಂಬರ್ 2021, 16:05 IST
ಅಕ್ಷರ ಗಾತ್ರ

ಹಾಸನ: ‘ಜಿಲ್ಲೆಯ ಅಭಿವೃದ್ಧಿಗೆ ಜೆಡಿಎಸ್‌ ಸಾಕಷ್ಟು ಕೊಡುಗೆ ನೀಡಿದ್ದು, ಇದನ್ನು ಗಮನದಲ್ಲಿಟ್ಟು ಕೊಂಡು ವಿಧಾನ ಪರಿಷತ್ ಚುನಾವಣೆ ಯಲ್ಲಿ ಪಕ್ಷದ ಅಭ್ಯರ್ಥಿ ಆರ್.ಸೂರಜ್‌ ಅವರನ್ನು ಬೆಂಬಲಿಸಬೇಕು’ ಎಂದು ಶಾಸಕ ಎಚ್.ಡಿ. ರೇವಣ್ಣ ಹೇಳಿದರು.

‘ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಹೊರಗಿಟ್ಟು ಮತದಾರರು ಜೆಡಿಎಸ್‌ಗೆ ಮತನೀಡಲು ನಿರ್ಧರಿಸಿ ದ್ದಾರೆ. ಯಾವ ಅಭ್ಯರ್ಥಿ ಬಗ್ಗೆಯೂ ಟೀಕೆ, ಟಿಪ್ಪಣಿ ಮಾಡುವುದಿಲ್ಲ‌. ಕಳೆದ ಬಾರಿಮಾಡಿದ ತಪ್ಪನ್ನು ಮತ್ತೆ ಮಾಡದಂತೆ ಗ್ರಾಮ ಪಂಚಾ ಯಿತಿ ಸದಸ್ಯರು ತೀರ್ಮಾನ ಮಾಡಿ ದ್ದಾರೆ. ಎಚ್‌.ಡಿ.ದೇವೇಗೌಡ, ಕುಮಾರಸ್ವಾಮಿ ಜಿಲ್ಲೆಗೆ ಸಾಕಷ್ಟು ಕೊಡುಗೆ ನೀಡಿದ್ದು, ಅದಕ್ಕಾಗಿ ಅಭ್ಯರ್ಥಿಗೆಲುವಿಗೆ ಸಹಕರಿಸಬೇಕು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

‘ಈ ಚುನಾವಣೆಯಲ್ಲಿ ನನ್ನದೇ ಹೆಸರಿನ ವ್ಯಕ್ತಿ ನಾಮಪತ್ರ ಹಾಕಿರುವು ದರ ಹಿಂದೆ ಕಾಂಗ್ರೆಸ್– ಬಿಜೆಪಿಕೈವಾಡ ಇದೆ. ಅವರಿಗೆ ಇಂಥ ಸ್ಥಿತಿ ಬಂದಿದೆ. ಎರಡೂ ಪಕ್ಷಗಳು ಜೆಡಿಎಸ್‌ ಪ್ರತಿಸ್ಪರ್ಧಿ ಎನ್ನುತ್ತಿವೆ.ಅಲ್ಲಿಗೆ ಜೆಡಿಎಸ್ ಶಕ್ತಿ ಏನು ಎಂಬುದು ಗೊತ್ತಾಗಿದೆ’ ಎಂದು ತಿರುಗೇಟು ನೀಡಿದರು.

‘ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ನ ಕೆಲ ನಾಯಕರಿಗೆ ಇಲ್ಲ.ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ಸಾವಿರಾರು ಕೋಟಿ ರೈತರ ಸಾಲವನ್ನು ಕುಮಾರಸ್ವಾಮಿ ಮನ್ನಾಮಾಡಿದರು. ಜಿಲ್ಲೆಯ ರೈತರ ₹ 500 ಕೋಟಿ ಸಾಲ ಮನ್ನಾ ಮಾಡಿದರು. ರಾಷ್ಟ್ರೀಕೃತಬ್ಯಾಂಕ್‌ಗಳಲ್ಲಿ ₹ 2000 ಕೋಟಿ ಸಾಲ ಮನ್ನಾ ಮಾಡಲಾಗಿದೆ. ಸುಮಾರು ₹ 200 ಕೋಟಿಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ನೀಡಿದ್ದಾರೆ. ಕುಮಾರಣ್ಣನಿಗೆ ಒಳ್ಳೆಯ ಹೆಸರು ಬರುತ್ತೆ ಅಂತಸರ್ಕಾರವನ್ನು ಬೀಳಿಸಿದರು’ ಎಂದು ದೂರಿದರು.

ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ಎಸಿಬಿ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಹಲವು ಇಲಾಖೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಬಗ್ಗೆ ಹಿಂದೆಯೇ ಹೇಳಿದ್ದೆ. ಮೂರುವರ್ಷಗಳಿಂದ ಗುತ್ತಿಗೆದಾರರಿಗೆ ಕಾಮಗಾರಿ ಬಿಲ್‌ ಆಗಿಲ್ಲ. ಹಣ ಕೊಟ್ಟವರಿಗೆ ಮಾತ್ರ ಕೆಲಸವಾಗುತ್ತಿದೆ. ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗುತ್ತಿಗೆದಾರರೇ ಪತ್ರಬರೆದಿದ್ದಾರೆ’ ಎಂದರು.

ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT