ಭಾನುವಾರ, ಆಗಸ್ಟ್ 14, 2022
26 °C

ಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ವಾಸನೆ: ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಭ್ರಷ್ಟಾಚಾರದ ವಾಸನೆ ಬಡಿಯುತ್ತಿದೆ ಎಂದು ಸಂಸದ ಡಿ.ಕೆ ಸುರೇಶ್ ಗಂಭೀರ ಆರೋಪ ಮಾಡಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣಕ್ಕೆ ಹಿಂದೂಗಳಾಗಿ ಸಂಪೂರ್ಣ ಬೆಂಬಲ ನೀಡಲಾಗುವುದು. ಆದರೆ ದೇಶದಾದ್ಯಂತ ದೇಣಿಗೆ ಸಂಗ್ರಹಿಸಿ, ಯಾರಿಗೋ ಅನುಕೂಲ ಮಾಡಿಕೊಡಲು ಅರ್ಧ ಗಂಟೆ ಯಲ್ಲಿ ಎರಡು ಬಾರಿ ಒಪ್ಪಂದ ರದ್ದು ಮಾಡಿ, ಮತ್ತೆ ₹18 ಕೋಟಿಗೆ ಜಮೀನು ಖರೀದಿ ಮಾಡಿರುವುದರಿಂದ ಭ್ರಷ್ಟಾಚಾರದ ವಾಸನೆ ಕಂಡು ಬರುತ್ತಿದೆ. ಶ್ರೀರಾಮ ಯಾವತ್ತು ಒಳ್ಳೆಯದು ಮಾಡುವುದಿಲ್ಲ. ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದಿರಬಹುದು. ಅದೇ ರಾಮ ಇವರನ್ನು ಬಲಿ ತೆಗೆದುಕೊಳ್ಳುತ್ತಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊರೊನಾ ಕಾಲದಲ್ಲೂ ಬಿಜೆಪಿಗೆ ಅಧಿಕಾರದ ಚಿಂತೆಯಾಗಿದೆ. ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಪಕ್ಷದಲ್ಲಿ ನಾಯಕತ್ವ ಗೊಂದಲ ಹಾಗೂ ಸಿ.ಎಂ ಸ್ಥಾನದ ಕಿತ್ತಾಟದ ಸಮಸ್ಯೆ ಬಗೆಹರಿಸಲು ಬಂದಿದ್ದಾರೆ. ಬಿಜೆಪಿ ನಾಯಕರ ಕಿತ್ತಾಟದ ವಿಚಾರ ಬೇಕಿಲ್ಲ. ಜನರ ಜೀವ ಉಳಿಸಲು ಹೋರಾಟ ಮಾಡುತ್ತಿದ್ದೇವೆ ಎಂದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.