ಸೋಮವಾರ, ಆಗಸ್ಟ್ 8, 2022
23 °C

ಕಳವಾಗಿದ್ದ ಚಿನ್ನ ಮಾಲೀಕರಿಗೆ ವಾಪಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಣನೂರು: ಪಟ್ಟಣದ ಜ್ಯುವೆಲ್ಲರಿಶಾಪ್‌ನಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿ 55 ಗ್ರಾಂ ಒಡವೆಯನ್ನು ಪೊಲೀಸರುವಶಕ್ಕೆ ತೆಗೆದುಕೊಂಡಿದ್ದಾರೆ.

ಅರಕಲಗೂಡು ತಾಲ್ಲೂಕಿನ ಕಸಬಾ ಹೋಬಳಿಯ ಹರದೂರು ಗ್ರಾಮದ ಪ್ರತಾಪ್ (22) ಬಂಧಿತ ಆರೋಪಿ. ಈತ ಕಳೆದ ತಿಂಗಳು ಕೊಣನೂರಿನ ಚಾಮುಂಡೇಶ್ವರಿ ಜ್ಯುವೆಲ್ಲರಿ ಶಾಪ್‌ನಲ್ಲಿ ಗ್ರಾಹಕನ ಸೋಗಿನಲ್ಲಿ ಒಡವೆ ಕದ್ದು ಪರಾರಿಯಾಗಿದ್ದ. ಅಂಗಡಿ ಮಾಲೀಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ದೃಶ್ಯವನ್ನಾಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಆತ ಕದ್ದಿದ್ದ ಒಡವೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪಿಎಸ್‌ಐ ಸಾಗರ್ ತಿಳಿಸಿದ್ದಾರೆ.

ಆರೋಪಿ ಪ್ರತಾಪ್ ಚನ್ನರಾಯಪಟ್ಟಣದಲ್ಲೂ ಕಳ್ಳತನ ನಡೆಸಿದ್ದ 20 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು