ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ಸಾಲು ಮರದ ತಿಮ್ಮಕ್ಕ ದಾಖಲು

Published 3 ಅಕ್ಟೋಬರ್ 2023, 13:30 IST
Last Updated 3 ಅಕ್ಟೋಬರ್ 2023, 13:30 IST
ಅಕ್ಷರ ಗಾತ್ರ

ಬೇಲೂರು: ಸಮೀಪದ ಬಳ್ಳೂರು ಗ್ರಾಮದಲ್ಲಿ ದತ್ತು ಪುತ್ರ ಉಮೇಶ್ ಅವರ ನಿವಾಸದಲ್ಲಿದ್ದ, ಕರ್ನಾಟಕ ಸರ್ಕಾರದ ಪರಿಸರ ರಾಯಭಾರಿ ಸಾಲು ಮರದ ತಿಮ್ಮಕ್ಕ ಅವರು ಉಸಿರಾಟದ ತೀವ್ರ ಸಮಸ್ಯೆ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ಬೇಲೂರಿನಿಂದ ಮಂಗಳವಾರ ಆಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಯಿತು.

ಮೂರು ತಿಂಗಳ ಹಿಂದೆ ತಿಮ್ಮಕ್ಕನವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದ ನಂತರ ಬೆಂಗಳೂರಿನ ಬಾಡಿಗೆ ಮನೆಯಲ್ಲಿ ವಾಸಿಸಲು ಸಾಧ್ಯವಾಗದೆ ದತ್ತು ಪುತ್ರನ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಸೆ. 26ರಂದು ತಿಮ್ಮಕ್ಕ ಅವರಿಗೆ ಉಸಿರಾಟದಲ್ಲಿ ಸ್ವಲ್ಪ ಏರು ಪೇರಾಗಿದ್ದರಿಂದ ಬೇಲೂರಿನ ಸರ್ಕಾರಿ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ, ಸೋಮವಾರ ರಾತ್ರಿಯಿಂದ ಉಸಿರಾಟದಲ್ಲಿ ತೀವ್ರ ಏರು ಪೇರಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಯಿತು.

ತಿಮ್ಮಕ್ಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಬರಬೇಕಾದ ಆಂಬುಲೆನ್ಸ್ ವಾಹನ ಎರಡು ಗಂಟೆ ತಡವಾಗಿ ಬಂದಿದ್ದರಿಂದ ತಿಮ್ಮಕ್ಕನವರು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿಜಯ್ ಮತ್ತು ಬೇಲೂರು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಸತೀಶ್ ವಿರುದ್ಧ ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT