ಹಾಸನ: ಕಳೆದ ವರ್ಷ ತಾಲ್ಲೂಕು ಮಟ್ಟದಲ್ಲಿ 20 ಪಾಲಿಕ್ಲಿನಿಕ್ ಪ್ರಾರಂಭ ಮಾಡಲಾಗಿದ್ದು, ಈ ವರ್ಷ 200 ಹೊಸ ಕಟ್ಟಡಕ್ಕೆ ಮಂಜೂರಾತಿ ದೊರೆತಿದೆ. 400 ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ತೆಗೆದುಕೊಳ್ಳಲಾಗಿದೆ. 700 ಡಿ ಗ್ರೂಪ್ ನೌಕರರನ್ನು ನೇಮಿಸಿಕೊಳ್ಳಲು ಈಗಾಗಲೇ ಟೆಂಡರ್ ಕರೆಯಲಾಗಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸಹಯೋಗದಲ್ಲಿ ಭಾನುವಾರ ನಗರದ ಸಂತೇಪೇಟೆ ಸರ್ಕಲ್ ಬಳಿಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಆರ್ಐಡಿಎಫ್ ಟ್ರಾಂಚ್ 28 ಯೋಜನೆಯಡಿ ಜಿಲ್ಲಾ ಪ್ರಾಣಿ ಪ್ರಯೋಗಾಲಯ (ಪಶು ರೋಗ ತನಿಖಾ ಪ್ರಯೋಗಾಲಯ ಮತ್ತು ಮಾಹಿತಿ ಕೇಂದ್ರ)ದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ರಾಸುಗಳ ಸಾಕಾಣಿಕೆಯಲ್ಲಿ ದೇಶದಲ್ಲಿಯೇ ಕರ್ನಾಟಕ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ರಾಜ್ಯದಲ್ಲಿ ಬೆಳಗಾವಿ ಜಿಲ್ಲೆ ಪ್ರಥಮ ಹಾಗೂ ಹಾಸನ ಜಿಲ್ಲೆ ಎರಡನೇ ಸ್ಥಾನದಲ್ಲಿವೆ ಎಂದು ತಿಳಿಸಿದರು.

ರೈತರಿಗೆ ಅನುಕೂಲ ಕಲ್ಪಿಸುವ ಜವಾಬ್ದಾರಿ ನಮ್ಮ ಮೇಲಿದೆ. ಹೈನುಗಾರಿಕೆ ದಿನೇ ದಿನೇ ಬೆಳೆಯುತ್ತಿದೆ. ರೈತರಿಗೆ ಪ್ರಯೋಜನವಾಗಲಿ ಎಂದು ಈ ಪ್ರಯೋಗಾಲಯ ನಿರ್ಮಿಸಲಾಗುತ್ತಿದೆ. ಜಿಲ್ಲೆ ಜನತೆ ಇದರ ಸದುಪಯೋಗ ಪಡೆಯಬೇಕು ಎಂದರು.

ಸರ್ಕಾರ ರೈತರ ಪರವಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ರಾಸುಗಳ ಆರೋಗ್ಯದ ದೃಷ್ಟಿಯಿಂದ ಕಾಲಕಾಲಕ್ಕೆ ಲಸಿಕೆ ನೀಡಲಾಗುತ್ತಿದೆ. ಕೃಷಿಕರು ಹೈನುಗಾರಿಕೆಯನ್ನು ಉಪ ಕಸುಬಾಗಿ ಸ್ವೀಕರಿಸಿದ್ದಾರೆ. ಹಾಸನ ಜಿಲ್ಲೆಯ ಜನರು ಬಹಳ ಪ್ರೀತಿಯಿಂದ ಆಸಕ್ತಿ ವಹಿಸಿ ಹೈನುಗಾರಿಕೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಒಂದು ಲೀಟರ್ ಹಾಲಿಗೆ ₹3 ಹಾಗೂ ₹4 ಸೇರಿದಂತೆ ರಾಜ್ಯ ಸರ್ಕಾರ ಎರಡು ಬಾರಿ ಒಟ್ಟು ಒಟ್ಟು ₹7 ಹಾಲಿನ ದರ ಹೆಚ್ಚಳ ಮಾಡಿದೆ. ಇದರಿಂದ ರೈತರಿಗೆ ಅನುಕೂಲವಾಗಿದೆ. ಅನೇಕ ಸಮಸ್ಯೆಗಳಿದ್ದು, ಈಗಾಗಲೇ ಮುಖ್ಯಮಂತ್ರಿ ಜೊತೆ ಚರ್ಚಿಸಿ, ಹಂತ ಹಂತವಾಗಿ ಪರಿಹರಿಸಲಾಗುತ್ತಿದೆ ಎಂದು ತಿಳಿಸಿದರು.

ಗೃಹ ಮಂಡಳಿಯ ಅಧ್ಯಕ್ಷ, ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಪಶು ಸಂಗೋಪನೆ ದೇಶದ ಹಾಗೂ ರೈತಾಪಿ ವರ್ಗದ ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ವದ ಸ್ಥಾನ ಪಡೆದಿದೆ. ಗ್ರಾಮೀಣ ಬಡ ಜನತೆ ಆರ್ಥಿಕ ನೆರವು ಇಲ್ಲದೇ ಹೈನುಗಾರಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅವರಿಗೆ ಅನುಕೂಲ ಆಗುವಂತೆ ಬ್ಯಾಂಕ್ಗಳಲ್ಲಿ ಸಾಲ ಸೌಲಭ್ಯ ಒದಗಿಸಬೇಕು. ಜಾನುವಾರುಗಳಿಗೆ ಔಷಧಿ ಮತ್ತು ಚುಚ್ಚುಮದ್ದುಗಳನ್ನು ರಿಯಾಯಿತಿ ದರದಲ್ಲಿ ಒದಗಿಸಬೇಕು ಎಂದು ತಿಳಿಸಿದರು.

ನಿರುದ್ಯೋಗಿ ಯುವಕರು ಹೈನುಗಾರಿಕೆಯನ್ನು ಉತ್ಕೃಷ್ಟವಾಗಿ ಮಾಡಿದ್ದು, ತಿಂಗಳಿಗೆ ₹30ಸಾವಿರದಿಂದ ₹40 ಸಾವಿರ ಆದಾಯ ಗಳಿಸುತ್ತಿದ್ದಾರೆ.₹15 ಸಾವಿರಕ್ಕೆ ಹೊರಗೆ ಹೋಗಿ ಕೆಲಸ ಮಾಡುವ ಬದಲು, ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ತಮ್ಮ ಬಳಿ ಕೆಲಸ ಕೇಳಿಕೊಂಡು ಬರುವ ಯುವಕರಿಗೆ ತಿಳಿಹೇಳುತ್ತಿರುವುದಾಗಿ ಹೇಳಿದರು.

ಸಂಸದರಾದ ಶ್ರೇಯಸ್ ಪಟೇಲ್ ಮಾತನಾಡಿ, ಸಚಿವರು ಜನಸ್ನೇಹಿಯಾಗಿ ಕೆಲಸ ಮಾಡುತ್ತಿದ್ದಾರೆ. ಹಾಸನ ಜಿಲ್ಲೆಯಲ್ಲಿ ಹೊಸ ಪಶು ಚಿಕಿತ್ಸಾಲಯ ತೆರೆಯಲು ಹಾಗೂ ವೈದ್ಯರು ಮತ್ತು ಡಿ ಗ್ರೂಪ್ ನೌಕರರ ಕೊರತೆಯನ್ನು ನೀಗಿಸಲು ಮನವಿ ಮಾಡಿದರು.

ಮಹಾಪೌರ ಚಂದ್ರೇಗೌಡ ಎಂ. ಮಾತನಾಡಿ, ನಾಗರಿಕತೆ ಬೆಳೆದಂತೆ ರೋಗ ರುಜಿನಗಳು ಹೆಚ್ಚಾಗುತ್ತಿವೆ. ಮೂಕ ಪ್ರಾಣಿಗಳ ಆರೋಗ್ಯ ಸಂರಕ್ಷಣೆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪಶು ಪ್ರಯೋಗಾಲಯ ಪ್ರಾರಂಭ ಮಾಡುತ್ತಿರುವುದು ಸಂತೋಷದ ವಿಷಯ ಎಂದರು.

ರಾಜ್ಯ ಕುಕ್ಕುಟ ಮಂಡಳಿಯ ಅಧ್ಯಕ್ಷ ಹರೀಶ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಆಯುಕ್ತೆ ರೂಪಾ, ನಿರ್ದೇಶಕ ಡಾ.ಮಂಜುನಾಥ್ ಪಾಳೆಗಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಅಧಿಕಾರಿಗಳು ಉಪಸ್ಥಿತರಿದ್ದರು.

₹1.81 ಕೋಟಿ ವೆಚ್ಚದಲ್ಲಿ ಪ್ರಯೋಗಾಲಯ ನಿರ್ಮಿಸಲಾಗುತ್ತಿದ್ದು ಜಾನುವಾರುಗಳಲ್ಲಿ ಕಂಡು ಬರುವ ರೋಗಗಳ ಪರೀಕ್ಷೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವ ನಿಟ್ಟಿನಲ್ಲಿ ಸಹಕಾರಿ ಆಗುತ್ತದೆ.
ಡಾ. ರಮೇಶ್ ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ

ಮಾರ್ಚ್ವರೆಗೆ ಪ್ರೋತ್ಸಾಹ ಧನ ವಿತರಣೆ

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಹಿಂದಿನ ಬಿಜೆಪಿ ಸರ್ಕಾರ ₹700 ಕೋಟಿ ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿತ್ತು. ಅದನ್ನು ತೀರಿಸಿ ಮಾರ್ಚ್ವರೆಗೂ ಹೈನುಗಾರರಿಗೆ ಪ್ರೋತ್ಸಾಹ ಧನ ಕೊಟ್ಟಿದ್ದೇವೆ. ಏಪ್ರಿಲ್ ಮೇ ತಿಂಗಳದ್ದು ಮಾತ್ರ ಕೊಡಬೇಕು ಎಂದು ಸಚಿವ ಕೆ.ವೆಂಕಟೇಶ್ ಹೇಳಿದರು. ಹಾಸನ ಹಾಲು ಒಕ್ಕೂಟಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಂಗಾಮಿಗೆ ತಕ್ಕಂತೆ ಹಾಲಿನ ಉತ್ಪಾದನೆಯಲ್ಲಿ ಏರಿಳಿತ ಆಗುತ್ತಿದ್ದು ಇದರಿಂದ ಸಮಸ್ಯೆ ಆಗುತ್ತಿತ್ತು. ಇದೀಗ ಬಜೆಟ್ನಲ್ಲಿ ಹಣ ಜಾಸ್ತಿ ಮಾಡಿಸಿದ್ದೇವೆ. ಮುಂದೆ ಸಮಸ್ಯೆ ಆಗುವುದಿಲ್ಲ. ಮತ್ತೆ ಹಾಲಿನ ದರ ಹೆಚ್ಚಳ ಮಾಡುವುದಿಲ್ಲ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ನಂದಿನಿ ಹಾಲು ಮಾರಾಟ ಮಾಡಲು ಅವಕಾಶ ಕೊಡುವಂತೆ ಹಾಸನ ಮೈಸೂರು ಒಕ್ಕೂಟದವರು ಕೇಳಿದ್ದಾರೆ. ಬೆಮುಲ್ ಚುನಾವಣೆ ನಡೆಯುತ್ತಿದ್ದು ಅದು ಮುಗಿದ ನಂತರ ಬೇರೆ ಒಕ್ಕೂಟಗಳಿಗೆ ಒಂದೊಂದು ಪ್ರದೇಶದಲ್ಲಿ ಹಾಲು ಮಾರಾಟ ಮಾಡಲು ಅವಕಾಶ ನೀಡುವ ನಿಟ್ಟಿನಲ್ಲಿ ಯೋಚಿಸುತ್ತೇವೆ ಎಂದು ಹೇಳಿದರು. ಹಾಲು ಒಕ್ಕೂಟಗಳಿಗೆ ಸಂಬಂಧಿಸಿದಂತೆ ಎರಡು ತಿಂಗಳ ಹಿಂದೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ಮಾಡಲಾಗಿತ್ತು. ಆಡಳಿತ ಬಿಗಿ ಮಾಡಬೇಕು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಹೆಚ್ಚಾಗಿ ನೇಮಕ ಮಾಡಿರುವ ಹೊರಗುತ್ತಿಗೆ ನೌಕರರನ್ನು ಕಡಿಮೆ ಮಾಡುವಂತೆ ಸೂಚನೆ ಕೊಟ್ಟಿದ್ದರು. ಎಲ್ಲೆಡೆ ಭೇಟಿ ನೀಡುವಂತೆ ಹೇಳಿದ್ದರು. ಹಾಗಾಗಿ ಇಲ್ಲಿಗೆ ಬಂದಿದ್ದೇನೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.