ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಮಿಷಕ್ಕೆ ಸಾವಿರ ಲೀಟರ್‌ ಆಮ್ಲಜನಕ ಉತ್ಪಾದನೆ

ಹಿಮ್ಸ್‌ನಲ್ಲಿ ₹ 1 ಕೋಟಿ ವೆಚ್ಚದ ಘಟಕ ಉದ್ಘಾಟಿಸಿದ ಸಚಿವ ಗೋಪಾಲಯ್ಯ
Last Updated 7 ಅಕ್ಟೋಬರ್ 2021, 15:08 IST
ಅಕ್ಷರ ಗಾತ್ರ

ಹಾಸನ: ಹಾಸನ ವೈದ್ಯಕೀಯ ಕಾಲೇಜು (ಹಿಮ್ಸ್‌) ಆಸ್ಪತ್ರೆಯಲ್ಲಿ ಪಿ.ಎಂ ಕೇರ್ಸ್‍ನಿಂದ ನಿರ್ಮಾಣ ಮಾಡಿರುವ ಆಮ್ಲಜನಕ ಸ್ಥಾವರವನ್ನು ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಗುರುವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ‘ಅಂದಾಜು ₹1 ಕೋಟಿ ವೆಚ್ಚದಲ್ಲಿ ಆಮ್ಲಜನಕ ಸ್ಥಾವರ ನಿರ್ಮಿಸಿದ್ದು, ನಿಮಿಷಕ್ಕೆ ಒಂದು ಸಾವಿರ ಲೀಟರ್ ವೈದ್ಯಕೀಯ ಆಮ್ಲಜನಕ ಉತ್ಪಾದನೆ ಮಾಡುವ ಸಾಮರ್ಥ್ಯ ಹೊಂದಿದೆ. ಮುಂದಿನ ದಿನಗಳಲ್ಲಿ ಆಮ್ಲಜನಕ ಖರೀದಿಸುವ ಅವಲಂಬನೆ ತಗ್ಗಲಿದೆ. ತುರ್ತು ಸಂದರ್ಭದಲ್ಲಿ ವೈದ್ಯಕೀಯ ಆಕ್ಸಿಜನ್‌ಗಾಗಿ ಪರದಾಡುವುದೂ ತಪ್ಪಲಿದೆ’ ಎಂದು ತಿಳಿಸಿದರು.

‘ಸಾರ್ವಜನಿಕರ ಆರೋಗ್ಯ ವ್ಯವಸ್ಥೆ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆಸ್ಪತ್ರೆಗಳಲ್ಲೇ ದಿನ ನಿತ್ಯದ ವೈದ್ಯಕೀಯ ಆಮ್ಲಜನಕ ಉತ್ಪಾದಿಸುವ ಗುರಿಯೊಂದಿಗೆ ಹೊಸ ಘಟಕಗಳನ್ನು ಪ್ರಾರಂಭಿಸಲಾಗುತ್ತಿದೆ’ ಎಂದರು.

‘ಕೋವಿಡ್‌ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಆಮ್ಲಜನಕ ಕೊರತೆಯಾಗದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಕೊರತೆಯಿಲ್ಲ. ಹೆಚ್ಚು ಲಭ್ಯತೆ ಇದೆ. ಲಸಿಕೆ ನೀಡುವಂತೆ ಜನರು ಪ್ರತಿಭಟನೆ ಮಾಡುತ್ತಿದ್ದರು, ಈಗ ಅಧಿಕಾರಿಗಳೇ ಜನರ ಬಳಿಗೆ ತೆರಳಿ ಲಸಿಕೆ ನೀಡುತ್ತಿದ್ದಾರೆ’ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆನ್‌ಲೈನ್‌ಮೂಲಕ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಿ.ಎಂ ಕೇರ್ಸ್ ಅಡಿ ಸ್ಥಾಪಿಸಿದ್ದ ರಾಷ್ಟ್ರದ 35 ಪಿ.ಎಸ್.ಎ ಆಮ್ಲಜನಕ ಸ್ಥಾವರಗಳನ್ನು ಉದ್ಘಾಟಿಸಿ, ವಿಡಿಯೊ ಸಂವಾದದಲ್ಲಿ ಮಾತನಾಡಿದರು.

ಹಿಮ್ಸ್ ಸಭಾಂಗಣದಲ್ಲಿ ಸಚಿವ ಕೆ.ಗೋಪಾಲಯ್ಯ, ಶಾಸಕರಾದ ಸಿ.ಎನ್ ಬಾಲಕೃಷ್ಣ, ಕೆ.ಎಂ. ಶಿವಲಿಂಗೇಗೌಡ, ಪ್ರೀತಂ ಜೆ ಗೌಡ, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ. ಪರಮೇಶ್, ಹಿಮ್ಸ್ ನಿರ್ದೇಶಕ ಡಾ.ಬಿ.ಸಿ. ರವಿಕುಮಾರ್ ಅವರು ವಿಡಿಯೋ ಸಂವಾದ ವೀಕ್ಷಣೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT