ಹಾಸನ: ಕ್ಲಬ್‌ನಲ್ಲಿ ದುರ್ವರ್ತನೆ ತೋರಿದ ಆರೋಪದ ಮೇರೆಗೆ ಜಿಲ್ಲೆಯ ಬೇಲೂರು ಸಿಪಿಐ ಸುಬ್ರಹ್ಮಣ್ಯ, ಪಿಎಸ್‌ಐ ಪ್ರವೀಣ್ ಹಾಗೂ ಹಳೇಬೀಡು ಸಿಪಿಐ ಜಯರಾಮ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಆದೇಶಿಸಿದ್ದಾರೆ.
ಸೆ.3 ರಂದು ಬೇಲೂರಿನ ಪ್ಲಾಂಟರ್ಸ್ ಕ್ಲಬ್‌ನಲ್ಲಿ ಪಾರ್ಟಿ ಮಾಡಿದ್ದ ಅಧಿಕಾರಿಗಳು ಅಲ್ಲಿನ ಸಿಬ್ಬಂದಿ ಮೇಲೆ ದರ್ಪ ತೋರಿ, ಬೆದರಿಕೆ ಹಾಕಿದ್ದರು. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ತನಿಖಾ ವರದಿ ಆಧರಿಸಿ ಅಮಾನತು ಮಾಡಲಾಗಿದೆ.