ಮಂಗಳವಾರ, ಮೇ 11, 2021
27 °C

ಪ್ರತಿಭಟನೆ: ಬಸ್‌ ನಿಲ್ದಾಣದಲ್ಲೇ ವಿಷ ಸೇವಿಸಿದ ಸಾರಿಗೆ ನೌಕರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಸಾರಿಗೆ ನೌಕರರ ಮುಷ್ಕರ ತೀವ್ರಗೊಂಡಿದ್ದು, ಸೋಮವಾರ ಬಸ್‌ ನಿಲ್ದಾಣದಲ್ಲೇ ಸಾರಿಗೆ ನೌಕರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಹಾಸನ–ಚಿಕ್ಕಮಗಳೂರು ಸಾರಿಗೆ ನೌಕರರ ಸಹಕಾರಿ ಪತ್ತಿನ ಸಂಘದ ಉಪಾಧ್ಯಕ್ಷ ಪಾಲಾಕ್ಷ (40) ವಿಷ ಸೇವಿಸಿದ್ದು, ತೀವ್ರ ಅಸ್ವಸ್ಥಗೊಂಡಿರುವ ಇವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

‘ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು. ನಮ್ಮನ್ನು ವರ್ಗಾವಣೆ ಮಾಡಿ ಎಫ್ಐಆರ್‌ ಹಾಕಿದ್ದಾರೆ. ಅನಂತಸುಬ್ಬರಾವ್‌ ಅವರಿಂದ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಈ ಸರ್ಕಾರಕ್ಕೆ ಕಣ್ಣು ಇಲ್ಲ’ ಎಂದು ಪಾಲಾಕ್ಷ ಆರೋಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು