ಹಾಸನ: ದುರಂತದಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಆಗಿರುವ ನೋವು ಅರ್ಥ ಮಾಡಿಕೊಳ್ಳುವುದು ಅಸಾಧ್ಯ. ಅವರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿ, ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲಾಗುತ್ತಿದ್ದು, ವೈದ್ಯರಿಗೆ ಅಗತ್ಯ ಸೂಚನೆ ನೀಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. pic.twitter.com/1MzCnqSARZ
ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳು ಮುಂದಿನ ಪರೀಕ್ಷೆಯಲ್ಲಿ ಹಾಜರಾಗುವುದು ಕಷ್ಟ. ಸಂಬಂಧಪಟ್ಟ ಸಚಿವರೊಂದಿಗೆ ಮಾತನಾಡಿ ಅಂತಹ ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡುವ ಕುರಿತು ಚರ್ಚಿಸಲಾಗುವುದು.