ಶನಿವಾರ, ಜನವರಿ 28, 2023
15 °C

ಅರಸೀಕೆರೆ ಬಳಿ ನಡೆದ ಭೀಕರ ಅಪಘಾತದಲ್ಲಿ 9 ಜನ ಸಾವು: ಮೃತರ ಗುರುತು ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಅರಸೀಕೆರೆ ತಾಲ್ಲೂಕಿನ ಬಾಣಾವರ ಬಳಿ (ಶಿವಮೊಗ್ಗ–ಬೆಂಗಳೂರು ರಸ್ತೆ) ಶನಿವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಟ್ಟು 9 ಜನರು ಮೃತಪಟ್ಟಿದ್ದಾರೆ.

ರಸ್ತೆ ಅಪಘಾತದಲ್ಲಿ ಒಟ್ಟು 9 ಜನರು ಮೃತಪಟ್ಟಿದ್ದಾರೆ. ಅವರಲ್ಲಿ ನಾಲ್ವರು ಮಹಿಳೆಯರು, ಒಬ್ಬ ಪುರುಷ ಹಾಗೂ ನಾಲ್ವರು ಮಕ್ಕಳು ಸೇರಿದ್ದಾರೆ. 

ಮೃತರನ್ನು ಹಾಸನ ಜಿಲ್ಲೆಯ ಲೀಲಾವತಿ ರಮೇಶ್‌ (50), ಚೈತ್ರಾ ಶ್ರೀನಿವಾಸ (33), ವಂದನಾ ಗಂಗಣ್ಣ (20), ಭಾರತಿ ದೊಡ್ಡಯ್ಯ (50), ದೊಡ್ಡಯ್ಯ ಪಾಪಣ್ಣ (60), ಸಂಪತ್‌ (10), ಡಿಂಪಿ (12), ತನ್ಮಯಿ (10), ಧ್ರುವ (2) ಎಂದು ಗುರುತಿಸಲಾಗಿದೆ.

ಟೆಂಪೋ ಟ್ರಾವೆಲ್ಲರ್‌ನಲ್ಲಿ 14 ಜನರು ಪ್ರಯಾಣಿಸುತ್ತಿದ್ದು, 9 ಜನರು ಮೃತಪಟ್ಟಿದ್ದಾರೆ. ಉಳಿದ ಐವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಬಸ್ ಚಾಲಕ ಸೇರಿದಂತೆ ಬಸ್‌ನಲ್ಲಿದ್ದ ಐವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹಾಸನದ ಹಿಮ್ಸ್‌ಗೆ ದಾಖಲಿಸಲಾಗಿದೆ ಎಂದು ಎಸ್ಪಿ ಹರಿರಾಂ ಶಂಕರ್‌ ತಿಳಿಸಿದ್ದಾರೆ.

ಹಾಲಿನ ಟ್ಯಾಂಕರ್‌ ಚಾಲಕ ಡೈವರ್ಸನ್‌ ಫಲಕವನ್ನು ಗಮನಿಸಿದೇ, ತಪ್ಪು ದಾರಿಯಲ್ಲಿ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಮೃತರು ಧರ್ಮಸ್ಥಳದಿಂದ ಹಾಸನಾಂಬೆ ದರ್ಶನ ಮಾಡಿಕೊಂಡು ವಾಪಸ್ ತಮ್ಮ ಊರಿಗೆ ತೆರಳುತ್ತಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು